ಪರೀಕ್ಷಾ ಕೇಂದ್ರದಲ್ಲಿಯೇ ಮಗುವಿಗೆ ಜನ್ಮ ನೀಡಿದ 10ನೇ ತರಗತಿಯ ವಿದ್ಯಾರ್ಥಿ

ಮಧ್ಯಪ್ರದೇಶದ ಪಿತಾಂಪುರ್‌ನಲ್ಲಿ 10ನೇ ತರಗತಿ ಪರೀಕ್ಷೆ ಬರೆಯಲು ಬಂದಿದ್ದ ಬಾಲಕಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಧಾರ್ ಜಿಲ್ಲೆಯ ಪಿತಾಂಪುರ್ ಸೆಕ್ಟರ್–1 ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯಲ್ಲಿ ಈ ಘಟನೆ ಸಂಭವಿಸಿದೆ. ಪರೀಕ್ಷೆ ಬರೆಯುತ್ತಿದ್ದ ವೇಳೆ ಬಾಲಕಿಗೆ ಇದ್ದಕ್ಕಿದ್ದಂತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಬಳಿಕ ಶಾಲೆಯ ಶೌಚಾಲಯಕ್ಕೆ ಹೋದಾಗ ಅಲ್ಲಿ ಆಕೆಗೆ ಹೆರಿಗೆಯಾಗಿದೆ.
ಮಾಹಿತಿ ದೊರೆತ ತಕ್ಷಣ ಶಾಲಾ ಅಧಿಕಾರಿಗಳು ಪೊಲೀಸರಿಗೆ ಹಾಗೂ ಆರೋಗ್ಯ ಇಲಾಖೆಗೆ ಮಾಹಿತಿ ತಿಳಿಸಿದರು. ಆಂಬ್ಯುಲೆನ್ಸ್‌ ಕರೆಸಿ ತಾಯಿ ಮತ್ತು ಮಗುವನ್ನು ಪಿತಾಂಪುರ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರೂ ಪ್ರಸ್ತುತ ಸುರಕ್ಷಿತವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಧಾರ್ ಎಎಸ್ಪಿ ಪರುಲ್ ಬೇಲಾಪುರ್ಕರ್ ನೇತೃತ್ವದಲ್ಲಿ ಘಟನೆ ಕುರಿತು ತನಿಖೆ ಆರಂಭಿಸಲಾಗಿದೆ.
ಬಾಲಕಿ ಅಪ್ರಾಪ್ತ ವಯಸ್ಕಳಾಗಿರುವುದರಿಂದ ಪೊಲೀಸರು ಪೋಕೋ ಕಾಯ್ದೆ ಸೇರಿದಂತೆ ಇತರ ಸಂಬಂಧಿತ ವಿಧಿಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಾಥಮಿಕ ಪ್ರಕರಣ ದಾಖಲಿಸಿ ಮುಂದಿನ ಕ್ರಮಕ್ಕಾಗಿ ಪ್ರಕರಣವನ್ನು ಬೆತ್ಮಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಕಳೆದ ಎರಡು ವರ್ಷಗಳಿಂದ ತಾನು ಒಬ್ಬರೊಂದಿಗೆ ಸಂಬಂಧ ಹೊಂದಿದ್ದೆ ಮತ್ತು ಆ ಸಂಬಂಧದ ಪರಿಣಾಮವಾಗಿ ಗರ್ಭಿಣಿಯಾಗಿದ್ದೇನೆ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ಬಾಲಕಿ ತನ್ನ ಗರ್ಭಧಾರಣೆಯ ವಿಷಯವನ್ನು ಕುಟುಂಬಕ್ಕೆ ತಿಳಿಸಿರಲಿಲ್ಲ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top