ಸುಳ್ಯ ಯುವಜನ ಸಂಯುಕ್ತ ಮಂಡಳಿ ಇದರ ನೇತೃತ್ವದಲ್ಲಿ ತಾಲೂಕಿನ ಯುವಕ – ಯುವತಿ ಮಂಡಲಗಳಿಗೆ ಕ್ರೀಡಾಕೂಟ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು.
ಶಾಸಕಿ ಭಾಗೀರಥಿ ಮುರುಳ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರುರನ್ನು ಹಾಗೂ ಅರಣ್ಯ ಸಂಚಾರಿ ದಳ ಮಂಗಳೂರು ಇಲ್ಲಿಯ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ರೈರನ್ನು ಸನ್ಮಾನಿಸಲಾಯಿತು. ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ.ರಾಮಚಂದ್ರ ಸನ್ಮಾನ ನೆರವೇರಿಸಿದರು.
ಯುವಜನ ಸಂಯುಕ್ತ ಮಂಡಳಿ ಪೂರ್ವಾಧ್ಯಕ್ಷ ದಿನೇಶ್ ಮಡಪ್ಪಾಡಿ, ಮಂಡಳಿ ಗೌರವಾಧ್ಯಕ್ಷ ವಿಜಯಕುಮಾರ್ ಉಬರಡ್ಕ ಮುಖ್ಯ ಅತಿಥಿಗಳಾಗಿದ್ದರು.
ಮಂಡಳಿಯ ಕ್ರೀಡಾ ಕಾರ್ಯದರ್ಶಿ ಜನಾರ್ದನ ನಾಗತೀರ್ಥ, ಪ್ರಧಾನ ಕಾರ್ಯದರ್ಶಿ ಮುರಳಿ ನಳಿಯಾರು, ಕೋಶಾಧಿಕಾರಿ ಲೋಹಿತ್ ಬಾಳಿಕಳ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಸುಳ್ಯ ತಾಲೂಕಿನ ಯುವಕ ಯುವತಿ ಮಂಡಲಗಳಿಗೆ ಕ್ರೀಡಾಕೂಟ

















