ಕಾಡಾನೆಗಳಿಂದ ಆಗುತ್ತಿರುವ ಸಮಸ್ಯೆಗಳನ್ನು ತಡೆಯಲು ಸುಳ್ಯ ತಾಲೂಕನ್ನು ಕೇಂದ್ರವಾಗಿರಿಸಿ ಮಂಗಳೂರು ಅರಣ್ಯ ವಿಭಾಗಕ್ಕೆ ಎಲಿಫೆಂಟ್ ಟಾಸ್ಕ್ ಫೋರ್ಸ್ ನ್ನು ನಿಯೋಜನೆಗೊಳಿಸಿ ಸರಕಾರ ಆದೇಶ ಮಾಡಿದೆ. ತತ್ ಕ್ಷಣದಿಂದ ಈ ಕಾರ್ಯಪಡೆಗೆ ಸಿಬ್ಬಂದಿ ನೇಮಕಗೊಳಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಮಂಗಳೂರು ವಿಭಾಗದ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ವಲಯಗಳ ವ್ಯಾಪ್ತಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗುತ್ತಿದ್ದು, ಪ್ರತಿ ವರ್ಷವೂ ಬೆಳೆ ಪರಿಹಾರ ಹಾಗೂ ಮಾನವ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಹಾಗೂ ಜನವಸತಿ ಪ್ರದೇಶಗಳಿಗೆ ಆನೆಗಳು ನುಗ್ಗಿದಾಗ ಅವುಗಳನ್ನು ಓಡಿಸಲು ಮಡಿಕೇರಿ ವಿಭಾಗದಿಂದ ಎಲಿಫೆಂಟ್ ಟಾಸ್ಕ್ ಫೋರ್ಸ್ ಅನ್ನುಕರೆಯಿಸಬೇಕಾಗುತ್ತಿರುವುದರಿಂದ ಹಿಮ್ಮೆಟ್ಟಿಸುವ ಪ್ರಕ್ರಿಯೆ ತಡವಾಗುತ್ತಿದೆ. ಆದ್ದರಿಂದ, ದಕ್ಷಿಣ ಕನ್ನಡ ಹಿಮ್ಮೆಟ್ಟಿಸಲು ಮಡಿಕೇರಿ ಜಿಲ್ಲೆ, ಮಂಗಳೂರು ವಿಭಾಗಕ್ಕೆ ಹೊಸದಾಗಿ ಆನೆ ಕಾರ್ಯಪಡೆಯನ್ನು ರಚಿಸಿ ಆದೇಶ ಹೊರಡಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ ಸರಕಾರ ಈ ಕುರಿತು ಅಧಿಕೃತ ಆದೇಶ ಮಾಡಿದೆ.
ಈ ಕಾರ್ಯಪಡೆಯ ಕೇಂದ್ರಸ್ಥಾನ ಸುಳ್ಯವಾಗಿರುತ್ತದೆ. ಇದರಲ್ಲಿ ಒಬ್ಬರು ಉಪ ವಲಯ ಅರಣ್ಯಾಧಿಕಾರಿ, ಇಬ್ಬರು ಗಸ್ತು ಅರಣ್ಯ ಪಾಲಕರು, ವಾಹನ ಚಾಲಕರು/ತತ್ರಮಾನ ಸಿಬ್ಬಂದಿಗಳು 25 ಮಂದಿಯನ್ನು ನೇಮಿಸಲಾಗುತ್ತದೆ ಎದು ತಿಳಿದು ಬಂದಿದೆ.ಎಲಿಫೆಂಟ್ ಟಾಸ್ಕ್ ಫೋರ್ಸ್ ನ್ನು ಸ್ಥಾಪಿಸಲು ಶಾಸಕಿ ಭಾಗೀರಥಿ ಮುರುಳ್ಯ ಪ್ರಯತ್ನಿಸಿದ್ದರು.
ಸುಳ್ಯ ತಾಲೂಕನ್ನು ಕೇಂದ್ರವಾಗಿರಿಸಿ ಮಂಗಳೂರು ಅರಣ್ಯ ವಿಭಾಗಕ್ಕೆ ಎಲಿಫೆಂಟ್ ಟಾಸ್ಕ್ ಫೋರ್ಸ್ ನ್ನು ನಿಯೋಜನೆಗೊಳಿಸಿ ಸರಕಾರ ಆದೇಶ





































































