ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಯತ್ನಿಸಿದ ಯುವಕನ ಬಂಧನ

ಪುತ್ತೂರಿನ ರಿಲಯನ್ಸ್ ಮಾಲ್ ಬಳಿ ಕಾರು ಚಾಲಕರೊಬ್ಬರಿಗೆ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿ, ಗುಂಡು ಹಾರಿಸಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪುತ್ತೂರು ನಗರ ಪೊಲೀಸರು ಯುವಕನೊಬ್ಬನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಪುತ್ತೂರು ನಿವಾಸಿ ಮಹಮ್ಮದ್ ಶಫೀಕ್‌ (19) ಎಂದು ಎಂದು ತಿಳಿದು ಬಂದಿದೆ.
ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ (42) ಎಂಬವರು ನೀಡಿದ ದೂರಿನ ಪ್ರಕಾರ, ಈ ಘಟನೆಯು ಮಾರ್ಚ್ 2ರ ಮಧ್ಯಾಹ್ನ ಸಂಭವಿಸಿದೆ. ಹಕೀಂ ಅವರು ಪುತ್ತೂರಿನಿಂದ ಕೂರ್ನಡ್ಕಕ್ಕೆ ಕಾರಿನಲ್ಲಿ ಹೋಗುತ್ತಿದ್ದಾಗ, ಹೆಲ್ಮೆಟ್ ಧರಿಸದ ಸುಮಾರು ೩೦ ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ರಿಲಯನ್ಸ್ ಮಾಲ್ ಬಳಿ ಅವರ ಕಾರನ್ನು ಅಡ್ಡಗಟ್ಟಿದ್ದಾನೆ.
ಆರೋಪಿಯು ಹಕೀಂ ಅವರಿಗೆ ಪಿಸ್ತೂಲ್ ತೋರಿಸಿ ಗುಂಡು ಹಾರಿಸಲು ಪ್ರಯತ್ನಿಸಿ ಬೆದರಿಸಿರುತ್ತಾನೆ. ಈ ವೇಳೆ ಹಕೀಂ ಮತ್ತು ಅಲ್ಲಿದ್ದ ಸಾರ್ವಜನಿಕರು ಆತನನ್ನು ಹಿಡಿಯಲು ಪ್ರಯತ್ನಿಸಿದಾಗ, ಆರೋಪಿಯು ತನ್ನ ಮೋಟಾರ್ ಸೈಕಲ್‌ನಲ್ಲಿ ಸ್ಥಳದಿಂದ ಪರಾರಿಯಾಗಿದ್ದನು.
ದೂರಿನ ಅನ್ವಯ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬರ್: 26/2026, ಕಲಂ: 351(3) BNS 2023 ಮತ್ತು ಕಲಂ: 3, 25, 27 ಶಸ್ತ್ರಾಸ್ತ್ರ ಕಾಯ್ದೆ 1959 ಯಡಿ ಪ್ರಕರಣ ದಾಖಲಾಗಿರುತ್ತದೆ.
ತನಿಖೆ ನಡೆಸಿದ ಪೊಲೀಸರು ಮಹಮ್ಮದ್ ಶಫೀಕ್‌‌ನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಈತನಿಗೆ ಪಿಸ್ತೂಲ್ ಎಲ್ಲಿಂದ ಸಿಕ್ಕಿತು ಮತ್ತು ಬೆದರಿಕೆ ಹಾಕಲು ಕಾರಣವೇನು ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆ ಮುಗಿದ ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top