ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ 34 ನೇ ನೆಕ್ಕಿಲಾಡಿ ಬೊಳ್ಳಾರ್ ಎಂಬಲ್ಲಿ ಭಾನುವಾರ ನಡೆದಿದೆ. ಬಂದಾರು ಗ್ರಾಮದ ಕುರಾಯ ನಿವಾಸಿ, ಪದ್ಮುಂಜ ಸಹಕಾರಿ ಸಂಘದ ಹಿರಿಯ ಗುಮಾಸ್ತ ಚಿದಾನಂದ ಗೌಡ (56) ಮೃತ ಬೈಕ್ ಸವಾರ. ಚಿದಾನಂದ ಗೌಡರವರು ಕಾರ್ಯನಿಮಿತ್ತ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಬೊಳ್ಳಾರ್ ಎಂಬಲ್ಲಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಕ್‌ಗೆ ಕಾರು ಡಿಕ್ಕಿ; ಸವಾರ ಚಿದಾನಂದ ಗೌಡ ಸಾವು



































