ಕರ್ನಾಟಕದಾದ್ಯಂತ ಸರ್ಕಾರಿ ವೈದ್ಯರು ತಮ್ಮ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಿಂದ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸರ್ಕಾರದಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆ ವೈದ್ಯರು ಕರ್ತವ್ಯಕ್ಕೆ ಹಾಜರಾಗದೆ ಹೋರಾಟ ನಡೆಸಲು ತೀರ್ಮಾನಿಸಿದ್ದಾರೆ. ಮೊದಲ ಹಂತವಾಗಿ ಕಪ್ಪುಪಟ್ಟಿ ಧರಿಸಿ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. ವೇತನ ಪರಿಷ್ಕರಣೆ, ಭತ್ಯೆಗಳ ಹೆಚ್ಚಳ, ಖಾಲಿ ಇರುವ ವೈದ್ಯಕೀಯ ಹುದ್ದೆಗಳ ಭರ್ತಿ, ಆಸ್ಪತ್ರೆಗಳ ಮೂಲಸೌಕರ್ಯ ಅಭಿವೃದ್ಧಿ ಮತ್ತು ವೈದ್ಯರ ಸುರಕ್ಷತೆಗೆ ಕಠಿಣ ಕಾನೂನು ಜಾರಿಗೊಳಿಸುವುದು ಪ್ರಮುಖ ಬೇಡಿಕೆಗಳಾಗಿವೆ.
ಪ್ರತಿಭಟನೆಯ ಪರಿಣಾಮ ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರರೋಗಿ ವಿಭಾಗ (OPD) ಸೇವೆಗಳು ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಯಾವುದೇ ಅಧಿಕೃತ ಮಾಹಿತಿ ಇಲ್ಲ. ತುರ್ತು ಚಿಕಿತ್ಸೆ, ಐಸಿಯು ಹಾಗೂ ಹೆರಿಗೆ ಸೇವೆಗಳು ಎಂದಿನಂತೆ ಲಭ್ಯವಿರಲಿವೆ.ದ.ಕ ಜಿಲ್ಲೆಯಲ್ಲಿ ಪ್ರತಿಭಟನೆಯ ಕಾವು ಸ್ವಲ್ಪ ಮಟ್ಟಿಗೆ ಕಡಿಮೆ ಇರಲಿದೆ ಎಂದು ಹೇಳಗಾಗುತ್ತಿದೆ.
ನಾಳೆಯಿಂದ ಸರ್ಕಾರಿ ಆಸ್ಪತ್ರೆಗಳ OPD ಬಂದ್ ಸಾಧ್ಯತೆ?

















