ರಿಕ್ಷಾ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಿಕ್ಷಾ ಚಾಲಕನನ್ನು ಕಾರ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ನಿವಾಸಿ ವಸಂತ ಪೂಜಾರಿ( 52) ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.
ವಸಂತ ಪೂಜಾರಿ ರಿಕ್ಷಾ ಚಾಲಕನಾಗಿದ್ದು ರಿಕ್ಷಾದಲ್ಲಿ ತನ್ನ ಮನೆಗೆ ಹೋಗುವ ಸಂದರ್ಭದಲ್ಲಿ ಶಾಲೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಮನೆಗೆ ಬಿಡುವುದಾಗಿ ಹೇಳಿ ಪುಸಲಾಯಿಸಿ ರಿಕ್ಷಾ ಹತ್ತಿಸಿ ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ‌.
ಈ ಕುರಿತು ಆರೋಪಿ ವಸಂತ ಪೂಜಾರಿಯನ್ನು ಬಂಧಿಸಿರುವ ಕಾರ್ಕಳ ನಗರ ಠಾಣಾ ಪೊಲೀಸರು ಪೋಕ್ಸೋ ಹಾಗೂ ದಲಿತ ದೌರ್ಜನ್ಯ ತಡೆ ಕಾಯಿದೆಯನ್ವಯ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget . Ad Widget .

Leave a Comment

Your email address will not be published. Required fields are marked *

error: Content is protected !!
Scroll to Top