ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಮತ್ತು ವಾದ್ಯ ಪರಿಕರ ವಿತರಣಾ ಸಮಾರಂಭವು ಮಂಗಳೂರಿನ ಅಂಬೆಡ್ಕರ್ ಭವನದಲ್ಲಿ ಮಾ. 14ರಂದು ನಡೆಯಿತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ರವರು ಕಾರ್ಯಕ್ರಮ ಉದ್ಘಾಟಿಸಿದರು.
ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಯವರು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ವತಿಯಿಂದ ಮೂರು ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಶೋಧನೆ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಪುತ್ತೂರು ಅನಂತರಾಜ ಗೌಡ, ಅರೆಭಾಷಿಕರ ಸಂಘಟನೆ ಮತ್ತು ಸಮಾಜಸೇವೆಗಾಗಿ ಲೋಕೇಶ್ವರಿ ವಿನಯಚಂದ್ರ, ಅರೆಭಾಷೆ ಸಾಹಿತ್ಯ ವಿಭಾಗದಲ್ಲಿ ಕಟ್ರತನ ಲಲಿತಾ ಅಯ್ಯಣ್ಣ ರವರನ್ನು ಉಸ್ತುವಾರಿ ಸಚಿವರು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು.
ಲಯನ್ಸ್ ಮಾಜಿ ರಾಜ್ಯಪಾಲರಾದ ಎಂ. ಬಿ. ಸದಾಶಿವ ರವರು ಅಭಿನಂದನಾ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಅರೆಭಾಷೆಯಲ್ಲಿ ಪ್ರಕಟಗೊಂಡ ಪುಸ್ತಕದ ಬಿಡುಗಡೆಯನ್ನು ಮಾಡಲಾಯಿತು.
ಮುಖ್ಯ ಅಭ್ಯಾಗತರಾಗಿ ಸ್ಪೀಕರ್ ಡಾ. ಯು. ಟಿ. ಖಾದರ್ ಆಗಮಿಸಿದ್ದರು. ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ. ಎ ಗಫೂರ್, ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿಅಧ್ಯಕ್ಷ ಟಿ. ಎಂ. ಶಾಹೀದ್ ತೆಕ್ಕಿಲ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಶಾಲೆಟ್ ಲವೀನಾ ಪಿಃಟೋ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಡಿ. ಎಸ್ ಗಟ್ಟಿ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಕೊಡಗು ಗೌಡ ಸಮಾಜ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಅರೆಭಾಷೆ ಅಕಾಡೆಮಿ ಮಾಜಿ ಸದಸ್ಯ ಲೋಕಯ್ಯ ಗೌಡ ಕೆ, ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷೆ ಸೌಮ್ಯ ಸುಕುಮಾರ್, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಯುವ ಘಟಕದ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ಅಕಾಡೆಮಿ ರಿಜಿಸ್ಟ್ರಾರ್ ಚಿನ್ನ ಸ್ವಾಮಿ, ಸದಸ್ಯರಾದ ಚಂದ್ರಶೇಖರ ಪೇರಾಲು, ತೇಜಕುಮಾರ್ ಕುಡೆಕಲ್ಲು, ಲೋಕೇಶ್ ಊರುಬೈಲು, ಎನ್. ಎ. ಜ್ಞಾನೇಶ್, ಪಿ. ಎಸ್. ಕಾರ್ಯಪ್ಪ, ಸೂದನ ಎಸ್ ಈರಪ್ಪ, ಪಿ. ಎಂ. ಸಂದೀಪ್, ವಿನೋದ್ ಮೂಡಗದ್ದೆ, ಮೋಹನ ಪೊನ್ನ ಚನ, ಗೋಪಾಲಕೃಷ್ಣ ಕೆ. ಸಿ, ಕುದುಪಜೆ ಕೆ. ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮರ್ಕಂಜದ ಮಹಿಳಾ ಸಿಂಗಾರಿ ಮೇಳದ ತಂಡಕ್ಕೆ ಮತ್ತು ಕೊಡಗಿನ ಕಲಾ ತಂಡಕ್ಕೆ ವಾದ್ಯ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಯಿತು.
ಆರಂಭದಲ್ಲಿ ಜಯಪ್ರಕಾಶ್ ಪೆರುಮುಂಡ ಆಶಯ ಗೀತೆ ಪ್ರಸ್ತುತ ಪಡಿಸಿದರು. ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಯವರು ಪ್ರಾಸ್ತಾವಿಕ ಮಾತನಾಡಿದರು. ಚಂದ್ರಶೇಖರ ಪೇರಾಲು ಸ್ವಾಗತಿಸಿದರು. ಡಾ. ಎನ್. ಎ. ಜ್ಞಾನೇಶ್, ಲತಾಪ್ರಸಾದ್ ಕುದ್ದಾಜೆ, ಮೋಹನ ಪೊನ್ನಚನ ರವರು ಪ್ರಶಸ್ತಿ ಪುರಸ್ಕೃತರ ಸನ್ಮಾನ ಪತ್ರ ವಾಚಿಸಿದರು. ಚಂದ್ರಾವತಿ ಬಡ್ಡಡ್ಕ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಿರ್ವಹಿಸಿದರು. ಸನ್ಮಾನಿತರ ಪರವಾಗಿ ಅನಂತರಾಜ ಗೌಡರು ಅನಿಸಿಕೆ ವ್ಯಕ್ತ ಪಡಿಸಿದರು. ರಿಜಿಸ್ಟರ್ ಚಿನ್ನ ಸ್ವಾಮಿ ವಂದಿಸಿದರು. ಶ್ರೀಮತಿ ಸುಶ್ಮಿತಾ ಕಡಪಳ ಮತ್ತು ಪುರುಷೋತ್ತಮ ಕರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಬೆಳಗ್ಗೆ ಲೋಕೇಶ್ ಊರುಬೈಲು ನಿರ್ದೇಶನದಲ್ಲಿ ಅರೆಭಾಷೆ ಹಾಡುಗಳ ರಸ ಮಂಜರಿ ಕಾರ್ಯಕ್ರಮ ಪ್ರದರ್ಶನ ಗೊಂಡಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ 2025 ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಹಾಗೂ ಅರೆಭಾಷೆ ಪುಸ್ತಕ ಬಿಡುಗಡೆ ಕಾರ್ಯಕ್ರಮ


















