ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಬೆಳ್ಳಾರೆಯ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ದಿನಾಚರಣೆಯನ್ನು ಮಾ.31 ರಂದು ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯು ಮಾ.21 ರಂದು ಬೆಳ್ಳಾರೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿದ್ದವರು ತಮ್ಮ ತಮ್ಮ ಭಿಪ್ರಾಯಗಳನ್ನು ತಿಳಿಸಿದರು.
ಅಮರ ಸುಳ್ಯ ಸಮರ ಸಮಿತಿ ತಾಲೂಕು ಅಧ್ಯಕ್ಷ ಚಂದ್ರಾಕೋಲ್ಟಾರ್ ಮಾತನಾಡಿ ಐತಿಹಾಸಿಕ ಸ್ಥಳ ಬ್ರಿಟಿಷರ ಖಜಾನೆ ಇದ್ದ ಬಂಗ್ಲೆಗುಡ್ಡೆಯನ್ನು ಅಭಿವೃದ್ಧಿಪಡಿಸಬೇಕು. ಬೆಳ್ಳಾರೆಯನ್ನು ಪ್ರವಾಸಿ ತಾಣವಾಗಿ ಮಾಡುವುದು ಒಳಿತು ಎಂದು ಹೇಳಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಎನ್.ಎ.ಜ್ಞಾನೇಶ್ ರವರು ಮಾತನಾಡಿ ಈ ಬಾರಿ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ಕಾರ್ಯಕ್ರಮದಲ್ಲಿ ಎಲ್ಲಾ ಜಾತಿ ಧರ್ಮದವರು ಸೇರಿ ಆಚರಣೆ ಮಾಡಬೇಕು ಎಂದು ಹೇಳಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಪಿ.ಎಸ್.ಕಾರ್ಯಪ್ಪ, ವಸಂತ ಉಲ್ಲಾಸ್,ರವೀಂದ್ರ ಗೌಡ ಮರಕಡ,ಎ.ಕೆ.ಮಣಿಯಾಣಿ,ಹಿರಿಯ ಸಹಕಾರಿ ಕೂಸಪ್ಪ ಗೌಡ ಮುಗುಪ್ಪು,ಜಯರಾಮ ಉಮಿಕ್ಕಳ, ಮಹಾಬಲ ಗೌಡ ಕಲ್ಲೋಣಿ,ಮಹಾಲಿಂಗ ಪಾಟಾಳಿ,ಮಾಧವ ತಡಗಜೆ,ಪ್ರೇಮಚಂದ್ರ ಬೆಳ್ಳಾರೆ ಮತ್ತಿತರರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಅರೆಭಾಷೆ ಅಕಾಡೆಮಿ ಸದಸ್ಯೆ ಚಂದ್ರಾವತಿ ಬಡ್ಡಡ್ಕ ಸ್ವಾಗತಿಸಿದರು. ಸಭೆ ಮುಗಿದ ಬಳಿಕ ಎಲ್ಲರು ಬಂಗ್ಲೆಗುಡ್ಡೆಗೆ ಭೇಟಿ ನೀಡಿದರು.
ಮಾ.31ಕ್ಕೆ ಬೆಳ್ಳಾರೆಯ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ














































