March 25, 2026

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ದಕ್ಷಿಣ ಕನ್ನಡದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ವಿಶೇಷ ಕರೆ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಂಸದರು, ನಮ್ಮ ಜಿಲ್ಲೆಯ 14ರಿಂದ 15 ವರ್ಷದೊಳಗಿನ ಎಲ್ಲಾ ಕಿಶೋರಿಯರು ಸ್ವಯಂಪ್ರೇರಿತರಾಗಿ ಈ ಲಸಿಕೆಯನ್ನು ಪಡೆದುಕೊಳ್ಳುವ ಮೂಲಕ ‘ಆರೋಗ್ಯವಂತ ಭಾರತ – ಆರೋಗ್ಯವಂತ ದಕ್ಷಿಣ ಕನ್ನಡ’ ನಿರ್ಮಾಣಕ್ಕೆ ಸಹಕರಿಸಬೇಕು. […]

ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ Read More »

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಾಹಿತಿ ವೈ.ಎಸ್ . ಹರಗಿ ಯವರ “ಇಮಾಮ್ ಸಾಹೇಬರ ಕುದುರೆ” ಕಾದಂಬರಿಗೆ 2025 ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.ಇವರ 2024 ನೇ ಸಾಲಿನ ಅತ್ಯುತ್ತಮ ಕೃತಿ ಎಂದು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಶಸ್ತಿಯಲ್ಲಿ 25 ಸಾವಿರ ನಗದು ಬಹುಮಾನ, ಫಲಕ , ಪ್ರಶಸ್ತಿ ಪ್ರಮಾಣ ಪತ್ರ ಒಳಗೊಂಡಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್. ಎನ್. ಮುಕುಂದರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವೈ.ಎಸ್ ಹರಗಿ ಅವರು

ಸಾಹಿತಿ ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ವೈ. ಎಸ್. ಹರಗಿ ಯವರ ಕಾದಂಬರಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ Read More »

ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ

ಸುಳ್ಯ ಸೀಮಾಧಿಪತಿ ತೊಡಿಕಾನ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಕಾಲಾವದಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಹಂಚಿಕೆ ಮತ್ತು ಹಸಿರುವಾಣಿ ಸಂಗ್ರಹಣೆ ಕುರಿತಾದ ಸಭೆ ನಾಳೆ (ಮಾ 26)ರಂದು ಉಬರಡ್ಕ ಮತ್ತು ತೊಡಿಕಾನ ಗ್ರಾಮಗಳಲ್ಲಿ ನಡೆಯಲಿದ್ದು ಗ್ರಾಮ /ಬೈಲಿಗೆ ಸಂಬಂಧಪಟ್ಟ ಮನೆಯವರು ಕೆಳಗೆ ತಿಳಿಸಿದ ಸ್ಥಳದಲ್ಲಿ ಸೇರಬೇಕಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಯು.ಕೆ ಮತ್ತು ಜಾತ್ರೋತ್ಸವ ಸಮಿತಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಿನಂತಿಸಿಕೊಂಡಿದ್ದಾರೆ.ಉಬರಡ್ಕಸ್ಥಳ :ಶ್ರೀ ಶಾಸ್ತಾವು ನರಸಿಂಹ ದೇವಸ್ಥಾನ -ಸಂಜೆ 5:30ಕ್ಕೆತೊಡಿಕಾನ1)ಊರುಪಂಜಸ್ಥಳ: ಊರುಪಂಜ ರತ್ನಾಕರ ರವರ ಮನೆಸಮಯ

ನಾಳೆ(ಮಾ.26) ಉಬರಡ್ಕ,ಕಾಡುಪಂಜ,ಊರುಪಂಜದಲ್ಲಿ ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವರ ಜಾತ್ರೋತ್ಸವ ಪೂರ್ವಭಾವಿ ಸಭೆ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು!

ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಯೊಬ್ಬನಿಗೆ ಜಾಮೀನು ಮಂಜೂರಾಗಿದೆ ಎಂದು ತಿಳಿದು ಬಂದಿದೆ.ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ 26ನೇ ಆರೋಪಿ ಕೊಡಗು ಜಿಲ್ಲೆಯ ಶನಿವಾರಸಂತೆ ನಿವಾಸಿ ರಿಯಾಜ್ ಎಚ್. ವೈ ಎಂಬಾತನಿಗೆ ಜಾಮೀನು ಮಂಜೂರಾಗಿದ್ದು ಉಚ್ಚ ನ್ಯಾಯಾಲಯ ಜಾಮೀನು ಅರ್ಜಿ ಪುರಸ್ಕರಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು! Read More »

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸವಲತ್ತು  ಪಡೆಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಯು ತನಗೆ ಪರಿಶಿಷ್ಟ ಜಾತಿಯ (SC) ಮೀಸಲಾತಿ ಮತ್ತು ರಕ್ಷಣೆಗಳು ಸಿಗಬೇಕು ಎಂದು ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಜಾತಿ ಎನ್ನುವುದು ಧರ್ಮದೊಂದಿಗೆ ಬೆಸೆದುಕೊಂಡಿದ್ದು, ಮತಾಂತರವಾದ ತಕ್ಷಣ ಹಳೆಯ ಜಾತಿ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.ಆಂಧ್ರಪ್ರದೇಶದ ಚಿಂತಾಡ ಆನಂದ್ ಪಾಲ್ ಎಂಬುವವರು ದಶಕಗಳಿಂದ ಕ್ರೈಸ್ತ ಧರ್ಮದ ಪಾಸ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ, ತಮ್ಮ ಬಳಿ ಇದ್ದ ‘ಹಿಂದೂ–ಮಾದಿಗ’ ಎಂಬ ಜಾತಿ ಪ್ರಮಾಣಪತ್ರವನ್ನು ಬಳಸಿಕೊಂಡು,

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಇತರ ಧರ್ಮಕ್ಕೆ ಮತಾಂತರಗೊಂಡವರು ಪರಿಶಿಷ್ಟ ಜಾತಿ ಸವಲತ್ತು  ಪಡೆಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

ರಾಜ್ಯದ ಕರಾವಳಿ ಸೇರಿದಂತೆ 17 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ ಕರಾವಳಿ ಸೇರಿದಂತೆ 17 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ Read More »

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ

ಅರಂತೋಡು,ಮಾ 24 : ತೆಕ್ಕಿಲ್ ಮಾದರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಗೂನಡ್ಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಯ ಸರ್ವತೋಮುಖ ಬೆಳವಣಿಗೆ ಮತ್ತು ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸಮಾಲೋಚನಾ ಸಭೆ ನಡೆಯಿತು‌.ಸಂಸ್ಥೆಯ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಿದ್ದರು.ಪೋಷಕರು ನಿವೃತ್ತ ಅಧ್ಯಾಪಕರ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಗ್ರಾಮೀಣ ಪ್ರದೇಶದ ತೆಕ್ಕಿಲ್ ಶಿಕ್ಷಣ ಸಂಸ್ಥೆಯಲ್ಲಿ ಗುಣಾತ್ಮಕ ಶಿಕ್ಷಣವನ್ನು ನೀಡುತ್ತಾ ಮೂಲ ಸೌಕರ್ಯ ಅಭಿವೃದ್ಧಿಯೊಂದಿಗೆ ಶಿಕ್ಷಣ ಸಂಸ್ಥೆಯನ್ನು ಬೆಳೆಸಬೇಕೆಂದು

ಗೂನಡ್ಕ ತೆಕ್ಕಿಲ್ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಅಭಿವೃದ್ಧಿ ಬಗ್ಗೆ ಸಮಾಲೋಚನಾ ಸಭೆ Read More »

error: Content is protected !!
Scroll to Top