ಕರ್ನಾಟಕದ ಕರಾವಳಿ ಭಾಗ ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ರಾಜ್ಯದ ಕರಾವಳಿ ಸೇರಿದಂತೆ 17 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ














































