ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿ ,ಪಿಕಪ್ ವಾಹನ ಸಮೇತ ಜಾನುವಾರುಗಳನ್ನು ಸುಳ್ಯ ಪೊಲೀಸರು ವಶಪಡಿಸಿಕೊಂಡ ಘಟನೆ ವರದಿಯಾಗಿದೆ. ಆಲೆಟ್ಟಿ ಮಾರ್ಗವಾಗಿ ಕೇರಳದ ಕಡೆಗೆ ಪಿಕಪ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ಪಿಕಪ್ ವಾಹನವನ್ನು ಹಿಂಬಾಲಿಸಿ ಈ ವೇಳೆ ನಾರ್ಕೊಡು ಮಿತ್ತಡ್ಕ ಎಂಬಲ್ಲಿ ವಾಹನವನ್ನು ತಡೆದು ಪೊಲೀಸರು ಪರಿಶೀಲನೆ ನಡೆಸಿದಾಗ ವಾಹನದಲ್ಲಿ ಮೂರು ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಟ್ಟಿ ಸಾಗಿಸುತ್ತಿದ್ದದ್ದು ಕಂಡು ಬಂದಿದೆ. ಈ ಸಂದರ್ಭದಲ್ಲಿ ಓರ್ವ ಆರೋಪಿ ಓಡಿ ತಪ್ಪಿಸಿಕೊಂಡಿದ್ದು ಪಿಕಪ್ ಚಾಲಕ ಕೇರಳ ಮೂಲದ ಇಸಾಕ್ ಮತ್ತು ವಾಹನ ಹಾಗೂ ಗೋವುಗಳನ್ನು ವಶಕ್ಕೆ ಪಡೆದು ಠಾಣೆಯಲ್ಲಿ ಪೊಲೀಸರು ಇರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಕ್ರಮ ಗೋಸಾಗಾಟ ಮಾಡುತ್ತಿದ್ದ ಮೂವರ ಬಂಧನ














































