ಶ್ರೀ ಮಹಾವಿಷ್ಣು ದೇವಸ್ಥಾನ ನಿಡ್ವಾಳ ಎಣ್ಣೂರು-ಐವತ್ತೊಕ್ಕು, ಕರಿಕಳ ಇದರ ಪುನರ್ ನಿರ್ಮಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ
ಏಪ್ರಿಲ್ 24 ರಿಂದ ಮೇ 3. ರ ತನಕ ವಿಜೃಂಭಣೆಯಿಂದ ಜರುಗಲಿದೆ.
ಆ ಪ್ರಯುಕ್ತ ದೇವಳದ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಮಾ.26 ಮತ್ತು .ಮಾ. 27 ರಂದು ಮೂಲಸ್ಥಾನ ಚಾಮುಂಡಿ ಮೂಲೆಯಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.
ಮಾ.27 ರಂದು ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಪೂರ್ವಾಹ್ನ 9.48 ರ ವೃಷಭ ಲಗ್ನ ಶುಭ ಮುಹೂರ್ತದಲ್ಲಿ ಶ್ರೀ ಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠೆ ಕಾರ್ಯಕ್ರಮ ನಡೆಯಿತು. ಮುಂಜಾನೆ ದೇವಳದ ಸಮೀಪದಲ್ಲಿದ್ದ ದೈವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳು ನಡೆದು ಬಳಿಕ ಶ್ರೀ ಚಾಮುಂಡಿ ಮತ್ತು ಪರಿವಾರ ದೈವಗಳ ಬಂಡಾರವನ್ನು ಮೂಲಸ್ಥಾನ ಚಾಮುಂಡಿ ಮೂಲೆಗೆ ವಾದ್ಯ ಘೋಷಗಳ ಮೆರವಣಿಗೆ ಮೂಲಕ ತಂದು ಶ್ರೀ ದೈವಗಳ ಪ್ರತಿಷ್ಠೆ ಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ ಜರುಗಿತು. ಬಳಿಕ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಆಡಳಿತ ಟ್ರಸ್ಟ್ ಅಧ್ಯಕ್ಷ ಮತ್ತು ಪುನರ್ ನಿರ್ಮಾಣ ಸಮಿತಿ ಕೋಶಾಧಿಕಾರಿ ಚಂದ್ರಪ್ರಕಾಶ್ ಕಂಬಳ,ಪುನರ್ ನಿರ್ಮಾಣ ಸಮಿತಿ ಮತ್ತು ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ನೇಮಿರಾಜ ಪಲ್ಲೋಡಿ, ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ, ಪಂಜ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ರಫೀಕ್ ಸಿ ಎಂ, ಪುನರ್ ನಿರ್ಮಾಣ ಸಮಿತಿ ಮತ್ತು ಬ್ರಹ್ಮಕಲಶೋತ್ಸವ ಪ್ರಧಾನ ಕಾರ್ಯದರ್ಶಿ ಕುಸುಮಾಧರ ಕರಿಮಜಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಅಶೋಕ್ ಮೇಲ್ಪಾಡಿ, ಖಜಾಂಜಿ ಕುಶಾಲಪ್ಪ ಮೇಲ್ಪಾಡಿ, ಪ್ರಧಾನ ಸಂಚಾಲಕ ರಾಮಕೃಷ್ಣ ಪುರಿಯಮನೆ ಸಾಯಿಕೃಪಾ, ಆಡಳಿತ ಮಂಡಳಿ ಕಾರ್ಯದರ್ಶಿ ಗುರುಪ್ರಸಾದ್ ತೋಟ, ದೇವಳದ ಪ್ರಧಾನ ಅರ್ಚಕರಾದ ಅಕ್ಷಯ ಭಟ್ ಬರ್ಲಾಯಬೆಟ್ಟು, ವಿವಿಧ ಸಮಿತಿಗಳ ಪದಾಧಿಕಾರಿಗಳು, ಭಕ್ತಾದಿಗಳು ಪಾಲ್ಗೊಂಡಿದ್ದರು.
-ಎ.24 ರಿಂದ ಮೇ 3 : ನಿಡ್ವಾಳ ಶ್ರೀ ಮಹಾವಿಷ್ಣು ದೇವರ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವ




















