ಉಪ್ಪಿನಂಗಡಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಖಾಸಗಿ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಯುವಕನ ವಿರುದ್ಧ ಪ್ರಕರಣ ದಾಖಲು

ಪ್ರೀತಿಸುವುದಾಗಿ ನಂಬಿಸಿ ಯುವತಿಯೋರ್ವಳ ಖಾಸಗಿ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಈ ಕ್ರತ್ಯ ಎಸಗಿದ ಆರೋಪಿ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಗೆ ಸುಮಾರು ಆರು ತಿಂಗಳ ಹಿಂದೆ ಇನ್‌ಸ್ಟಾಗ್ರಾಮ್ (Instagram) ಮೂಲಕ ಸುಶಾಂತ್ ಪೂಜಾರಿಯ ಪರಿಚಯವಾಗಿತ್ತು. ತಾನು ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ರಜೆಯಲ್ಲಿದ್ದೇನೆ ಎಂದು ನಂಬಿಸಿದ್ದ ಸುಶಾಂತ್, ಯುವತಿಯನ್ನು‌ ಪುಸುಲಾಯಿಸಿ ಸ್ನೇಹ ಬೆಳೆಸಿದ್ದ. ಈ ಸ್ನೇಹ ಕಾಲಕ್ರಮೇಣ ಪ್ರೀತಿಗೆ ತಿರುಗಿ, ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.
ಪ್ರೀತಿಯ ನಾಟಕವಾಡಿದ್ದ ಸುಶಾಂತ್, ಯುವತಿಗೆ ಪದೇ ಪದೇ ಖಾಸಗಿ ವಿಡಿಯೋ ಕಳುಹಿಸುವಂತೆ ಹಾಗೂ ನಗ್ನವಾಗಿ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸುತ್ತಿದ್ದ. ಮದುವೆಯಾಗುವ ಭರವಸೆ ನೀಡಿದ್ದರಿಂದ ಆತನ ಮಾತನ್ನು ನಂಬಿದ ಯುವತಿ, ತಾನು ಸ್ನಾನ ಮಾಡುವ ಸಂದರ್ಭದಲ್ಲಿ ವಿಡಿಯೋ ಕಾಲ್ ಮಾಡಿದ್ದಳು ಎನ್ನಲಾಗಿದೆ.ಈ ಸಂದರ್ಭವನ್ನು ಬಳಸಿಕೊಂಡ ಆರೋಪಿ ಸುಶಾಂತ್, ಯುವತಿಯ ಖಾಸಗಿ ದೃಶ್ಯಗಳನ್ನು ಗುಟ್ಟಾಗಿ ರೆಕಾರ್ಡ್ ಮಾಡಿಕೊಂಡಿದ್ದಲ್ಲದೆ, ಅದನ್ನು ವಾಟ್ಸ್‌ಅಪ್ ಮೂಲಕ ಇತರರಿಗೆ ಕಳುಸಿ ವಿಕೃತಿ ಮೆರೆದಿದ್ದಾನೆ. ಈ ಕೃತ್ಯಕ್ಕೆ ಆರೋಪಿಯ ಸಹೋದರಿಯೂ ಸಹಕಾರ ನೀಡಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವಿಡಿಯೋ ವೈರಲ್ ಆಗಿರುವುದು ತಿಳಿಯುತ್ತಿದ್ದಂತೆ ಆಘಾತಕ್ಕೊಳಗಾದ ಯುವತಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಸುಶಾಂತ್ ಪೂಜಾರಿ ಹಾಗೂ ಆತನ ತಂಗಿಯ ವಿರುದ್ಧ ವಿವಿಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ.





















































































Leave a Comment

Your email address will not be published. Required fields are marked *

error: Content is protected !!
Scroll to Top