ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ “ಚಿಣ್ಣರ ಕಲರವ” 5ನೇ ವರ್ಷದ 8 ದಿನಗಳ ಬೇಸಿಗೆ ಶಿಬಿರ ಉದ್ಘಾಟನೆ

ಸುಳ್ಯದ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ
ಏ.2ರಂದು “ಚಿಣ್ಣರ ಕಲರವ” 5ನೇ ವರ್ಷದ 8 ದಿನಗಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು
ಶಾಲಾ ಆವರಣದಲ್ಲಿ ನಡೆಯಿತು.
ಯಕ್ಷಗಾನ ಕಲಾವಿದ ಶ್ರೀ ಯೋಗಿಶ್ ಶರ್ಮ ಅವರು ಚಂಡೇವಾದನದ ಮೂಲಕ ಶಿಬಿರ ಉದ್ಘಾಟಿಸಿದರು.ಬಳಿಕ ಮಾತನಾಡಿದ ಅವರು ಮಕ್ಕಳಿಗೆ ಶಿಬಿರದ ಮಹತ್ವವನ್ನು ವಿವರಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನ್ಯೂಸ್ ನಾಟೌಟ್ ಸುಳ್ಯ ಮುಖ್ಯ ಸಂಪಾದಕರಾದ ಹೇಮಂತ್ ಸಂಪಾಜೆ ಅವರು ಮಾತನಾಡಿ, ಮಕ್ಕಳಲ್ಲಿ ಸೃಜನಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಇಂತಹ ಶಿಬಿರಗಳು ಸಹಾಯಕವಾಗುತ್ತವೆ ಎಂದು ತಿಳಿಸಿದರು.
ಶಾಲೆಯ ಅಧ್ಯಕ್ಷರಾದ ಶುಭಕರ್ ಬಿ.ಸಿ ಅಧ್ಯಕ್ಷತೆ ವಹಿಸಿದ್ದರು.
ಅವರು ಮಕ್ಕಳ ಪ್ರತಿಭೆಯನ್ನು ಹೊರತರುವಲ್ಲಿ ಶಿಬಿರದ ಪಾತ್ರ ಮುಖ್ಯ ಎಂದು ಪ್ರಶಂಸಿಸಿದರು. ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ ಅವರು ಶಿಬಿರದ ಉದ್ದೇಶವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಉತ್ಸಾಹದಿಂದ ಭಾಗವಹಿಸಿದರು. ಶಿಬಿರವು 8 ದಿನಗಳ ಕಾಲ ವಿವಿಧ ಚಟುವಟಿಕೆಗಳೊಂದಿಗೆ ಶಿಬಿರ ನಡೆಯಲಿದೆ‌.





















































































Leave a Comment

Your email address will not be published. Required fields are marked *

error: Content is protected !!
Scroll to Top