ಚಿನ್ನರ ಕಲರವ – ಸಮಾರೋಪ ಸಮಾರಂಭ

ಸುಳ್ಯ ಅಂಜಲಿ ಮಾಂಟೆಸ್ಸರಿ ಶಾಲೆಯಲ್ಲಿ ನಡೆದ ಚಿನ್ನರ ಕಲರವ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಅತ್ಯಂತ ಸಂತೋಷ ಮತ್ತು ಸಂಭ್ರಮದೊಂದಿಗೆ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸುಳ್ಯ ಬಿಇಒ ಶ್ರೀ ವೈ. ಎಸ್. ಹರಗಿ ಅವರು ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.
ಈ ಸಂದರ್ಭದಲ್ಲಿ ಇತ್ತೀಚೆಗೆ ನಿವೃತ್ತರಾದ ಮುಖ್ಯೋಪಾಧ್ಯಾಯರು ಹಾಗೂ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಶ್ರೀ ಶ್ರೀಧರ್ ಕೆರೆಮೂಲೆ ಅವರನ್ನು ಗೌರವಿಸಲಾಯಿತು. ಅವರ ಶಿಕ್ಷಣ ಕ್ಷೇತ್ರದ ಅಮೂಲ್ಯ ಸೇವೆಯನ್ನು ಸ್ಮರಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮವು ಪೂರ್ಣ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ನಂತರ ವೇದ್ಯಾ ಅವರು ಸ್ವಾಗತ ಭಾಷಣ ಮಾಡಿದರು. ಕಾರ್ಯಕ್ರಮವನ್ನು ಆಧ್ಯಾ ಅವರು ಸುಂದರವಾಗಿ ನಿರೂಪಿಸಿದರು.
ಈ ಶಿಬಿರದ ವಿಶೇಷತೆಯಾಗಿ, ಆರಂಭದಲ್ಲಿ ಯಕ್ಷಗಾನದ ಮೂಲಕ ಶಿಬಿರಕ್ಕೆ ಸಾಂಸ್ಕೃತಿಕ ಮೆರಗು ನೀಡಲಾಗಿದ್ದು, ಸಮಾರೋಪದಲ್ಲಿ ಶ್ರೀ ವಿಜಿತ್ ಅವರ ಮನಮೋಹಕ ಬಾಸುರಿ ವಾದನ ಕಾರ್ಯಕ್ರಮವನ್ನು ಇನ್ನಷ್ಟು ಆಕರ್ಷಕಗೊಳಿಸಿತು.
ಶಿಬಿರದಲ್ಲಿ ಭಾಗವಹಿಸಿದ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಪೋಷಕರು ತಮ್ಮ ಮಕ್ಕಳ ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಕಂಡು ಸಂತೋಷಪಟ್ಟರು.
ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಮಕ್ಕಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡು ಶಿಬಿರದ ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಕೊನೆಯಲ್ಲಿ ಪಾವನಿ ವಂದಿಸಿದರು.





















































































Leave a Comment

Your email address will not be published. Required fields are marked *

error: Content is protected !!
Scroll to Top