ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಪಾಲಡ್ಕ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಪಿಕಪ್ ನಡುವೆ ಅಪಘಾತ ಸಂಭವಿಸಿ ಅಪಘಾತದಲ್ಲಿ ಪಿಕಪ್ ನಲ್ಲಿದ್ದ ಪ್ರಯಾಣಿಕನ ಕೈ ಮುರಿತಗೊಂಡಿದೆ ಎಂದು ತಿಳಿದು ಬಂದಿದೆ.
ಕಾರು ಮಡಿಕೇರಿಯಿಂದ ಸುಳ್ಯ ಕಡೆ ಬರುತ್ತಿತ್ತು.ಪಿಕಪ್ ಸುಳ್ಯ ಕಡೆಯಿಂದ ಮಡಿಕೇರಿ ಕಡೆ ತೆರಳುತ್ತಿತ್ತು.ಗಾಯಗೊಂಡ ವ್ಯಕ್ತಿಯನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
ಪಾಲಡ್ಕ : ಕಾರು ಪಿಕಪ್ ನಡುವೆ ಅಪಘಾತ














































