ಸುಳ್ಯದ ಪೈಚಾರಿನಲ್ಲಿ ನೂತನವಾಗಿ ನಿರ್ಮಾಣ ಗೊಂಡಿರುವ ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಿನ್ನಲೆಯಲ್ಲಿ
ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುಂದರ ರಾವ್ ವಹಿಸಿದ್ದರು.ಶಾಸಕಿ ಭಾಗೀರಥಿ ಮುರುಳ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾಯರ್ತೋಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎಂ.ವೆಂಕಪ್ಪ ಗೌಡ, ಹಿರಿಯ ಸಹಕಾರಿ ಜಾಕೆ ಮಾಧವ ಗೌಡ, ಮಾದಿಗ ದಂಡೋರ ಅಖಿಲ ಭಾರತ ರಾಜ್ಯ ಸಂಸ್ಥಾಪಕಾಧ್ಯಕ್ಷ ಬಿ.ಹುಸೇನಪ್ಪ ಸ್ವಾಮಿ ಮಾದಿಗ ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಇಂಜಿನಿಯರ್ ದೇವಿಪ್ರಸಾದ್ , ಪ್ರಧಾನ ಕಾರ್ಯದರ್ಶಿ ಯಶವಂತ್ ಪಟ್ರಕೋಡಿ, ಕೋಶಾಧಿಕಾರಿ ಕೇಶವ ಮಾಸ್ತರ್ ಹೊಸಗದ್ದೆ, ಸಮಿತಿಯ ಸಂಚಾಲಕ ರಾಜೇಶ್ ಶೆಟ್ಟಿ ಮೇನಾಲ, ಆಡಳಿತ ಸಮಿತಿ ಅಧ್ಯಕ್ಷ ವೇಣುಗೋಪಾಲ, ಹಿರಿಯರಾದ ಕೃಷ್ಣ ಪೆರಾಜೆ, ಆಡಳಿತ ಮೊತ್ತೇಸರರಾದ ಸಂಜೀವರ ಮನೆಯವರಾದ ವಸಂತಿ, ಯಮುನಾ ವೇದಿಕೆಯಲ್ಲಿ ಆಸೀನರಾಗಿದ್ದರು. ಸಮಾರಂಭದಲ್ಲಿ ನಿವೃತ್ತ ಶಿಕ್ಷಕಿ ಯಶೋದಾ, ನಾರಾಯಣ ಗುರುಸ್ವಾಮಿ ದೊಡ್ಡರಿ, ರಮೇಶ್ ಪೂಜಾರಿ ಜಯನಗರ, ಸೀತಮ್ಮ ಚಾತುಮೇ, ಪ್ರೇಮಾನಂದ, ಐತಪ್ಪ ನಾಯ್ಕ, ಸುಂದರ ರೈ ಯವರನ್ನು ಸನ್ಮಾನಿಸಲಾಯಿತು.
ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು. ಬಳಿಕ ಛತ್ರಪತಿ ಶಿವಾಸಿ ನಾಟಕ ಪ್ರದರ್ಶನ ನಡೆಯಿತು.
ಪ್ರಣಮ್ಯ ಪ್ರಾರ್ಥಿಸಿದರು. ಸಹ ಸಂಚಾಲಕ ನಾರಾಯಣ ಎಸ್.ಎಂ. ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಉದಯಭಾಸ್ಕರ್ ಸುಳ್ಯ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಾಘವ ಪೆರಾಜೆ ವಂದಿಸಿದರು.
ಭಾರತ ಮಾತೆಯ ಭಾವ ಚಿತ್ರಕ್ಕೆ
ದೀಪ ಪ್ರಜ್ವಲಿಸಿ, ಪುಷ್ಪ ನಮನ ಸಲ್ಲಿಸಿದ ಬಳಿಕ ಸಭಾ ಕಾರ್ಯಕ್ರಮ ಆರಂಭಿಸಲಾಯಿತು.
ಮಾರಿಯಮ್ಮ ವೀರಭದ್ರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ,ಧಾರ್ಮಿಕ ಸಭಾ ಕಾರ್ಯಕ್ರಮ














































