ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಸಂಭ್ರಮದಲ್ಲಿದ್ದು ಈ ಹಿನ್ನೆಲೆಯಲ್ಲಿ, ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಅಡಗಿದ್ದ ಉಗ್ರರ ವಿರುದ್ಧ ನಡೆದಿದ್ದ ಕಾರ್ಯಾಚರಣೆಯ ವಿಶೇಷ ವೀಡಿಯೊವನ್ನು ಬಿಡುಗಡೆ ಮಾಡಿದೆ. ಒಂದು ವರ್ಷದ ಹಿಂದೆ, ಭಾರತದ ಭದ್ರತೆಗೆ ಸವಾಲಾಗಿದ್ದ ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ರಹಸ್ಯ ಕಾರ್ಯಾಚರಣೆ ನಡೆಸಿ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲಾಗಿತ್ತು. ಭಾರತದ ಮೇಲೆ ಕಣ್ಣು ಹಾಕುವ ಅಥವಾ ಭಯೋತ್ಪಾದನೆಗೆ ಬೆಂಬಲ ನೀಡುವ ಶಕ್ತಿಗಳನ್ನು ಭಾರತೀಯ ಸೇನೆ ಹುಡುಕಿ ಶಿಕ್ಷಿಸುತ್ತದೆ ಎಂಬ
ಸಂದೇಶವನ್ನು ಈ ವೀಡಿಯೊ ನೀಡಿದೆ.
ಆಪರೇಷನ್ ಸಿಂಧೂರ್‌ಗೆ ವರ್ಷದ ಸಂಭ್ರಮ : ವೀಡಿಯೊ ಹಂಚಿಕೊಂಡ ಭಾರತೀಯ ಸೇನೆ





















































