ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ
ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುವೇಂದು ಅಧಿಕಾರಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದ್ದು, ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬಿಜೆಪಿ ವೀಕ್ಷಕರಾಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಸುವೇಂದು
ಅಧಿಕಾರಿ ಅವರನ್ನು ಮುಖ್ಯಮಂತ್ರಿಯಾಗಿ ಅಯ್ಕೆ ಮಾಡಲಾಗಿದ್ದು, ನಾಳೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ.
ಸುವೇಂದು ಅಧಿಕಾರಿ ಜೊತೆ ಸುಮಿತ್ ಭಟ್ಟಾಚಾರ್ಯ, ಅಗ್ನಿಮಿತ್ರ ಪಾಲ್ ಮತ್ತು ರೂಪಾ ಗಂಗೂಲಿ ಸೇರಿದಂತೆ ನಾಲ್ವರು ಸಿಎಂ ಸ್ಥಾನದ ರೇಸ್ ನಲ್ಲಿದ್ದರು.
ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ





















































