ಕಡಬ : ನೀರಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಯುವತಿಯರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ,ಓದಿ

ಕಡಬ : ಸ್ನಾನಕ್ಕೆಂದು ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಿನ‌ ಸೆಳತಕ್ಕೆ ಸಿಲುಕಿ ಮೃತಪಟ್ಟ ಘಟನೆ ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಅರ್ಪಿತಾ (15) ಮತ್ತು ಸುನೀತಾ (21) ಎಂದು ಗುರುತಿಸಲಾಗಿದೆ. ಈ ಕುರಿತು ಮೃತ ಅರ್ಪಿತಾ ಅವರ ತಂದೆ ಹರೀಶ್ ಪಿ.ಕೆ ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇ 8ರಂದು ಮಧ್ಯಾಹ್ನ ಅರ್ಪಿತಾ, ಸುನೀತಾ, ಅಕ್ಷತಾ ಹಾಗೂ ನೆಟ್ಟಣದ ಶ್ರೇಯಾ ಸೇರಿದಂತೆ ಗೆಳೆಯರ ಬಳಗವು ಕೊಲ್ಯದಕಟ್ಟದ ಗುಂಡ್ಯ ಹೊಳೆಗೆ ಸ್ನಾನಕ್ಕೆಂದು ಹೋಗಿದ್ದರು. ಸಂಜೆ ಸುಮಾರು 4:30ರ ವೇಳೆಗೆ ನದಿಯಲ್ಲಿ ಈಜಾಡುತ್ತಿದ್ದಾಗ ಅರ್ಪಿತಾ ಮತ್ತು ಸುನೀತಾ ಅನಿರೀಕ್ಷಿತವಾಗಿ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗಿದ್ದವರು ಮೇಲೆ ಎಳೆಲೇ ಇಲ್ಲ . ಜೊತೆಯಲ್ಲಿದ್ದವರು ಇಬ್ಬರನ್ನೂ ರಕ್ಷಿಸಲು ಹರಸಾಹಸ ಪಟ್ಟರೂ ಸಾಧ್ಯವಾಗಲಿಲ್ಲ. ತಕ್ಷಣ ಜಾರ್ಜ್ ಎಂಬುವವರು ನೀರಿನಲ್ಲಿ ಹುಡುಕಾಟ ನಡೆಸಿ ಇಬ್ಬರ ಮೃತದೇಹಗಳನ್ನು ಹೊರತೆಗೆದಿದ್ದಾರೆ.



































































































Leave a Comment

Your email address will not be published. Required fields are marked *

error: Content is protected !!
Scroll to Top