ಬಂಟ್ವಾಳದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಕಾರ್ಯಕ್ರಮ

ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸಹಯೋಗದೊಂದಿಗೆ ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ ಇದರ ಆಶ್ರಯದಲ್ಲಿ ಕರಾವಳಿ ಕಲೋತ್ಸವ ಕಾರ್ಯಕ್ರಮದಲ್ಲಿ ಅರೆಭಾಷೆ ಸಾಂಸ್ಕೃತಿಕ ಸಂಭ್ರಮ – 2026 ಮೇ.6ರಂದು ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಅರೆಭಾಷೆ ಸಾಂಸ್ಕೃತಿಕ ಸಂಭ್ರಮ -2026 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲ ಉಮೇಶ್ ಕುಮಾ‌ರ್ ವೈ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿ.ಸಿ. ರೋಡಿನ ವಕೀಲರಾದ ಅಶ್ವನಿ ಕುಮಾ‌ರ್ ರೈ, ಪುತ್ತೂರು ಒಕ್ಕಲಿಗರ ಗೌಡ ಸೇವಾಸಂಘದ ಅಧ್ಯಕ್ಷ ಕೆ. ಸುಂದರ ಗೌಡ ನಡುಬೈಲು, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಲಸಿ. ಕುಶಾಲಪ್ಪ ಗೌಡ, ಅನಂತಾಡಿ, ವಲಯ ಒಕ್ಕಲಿಗರ ಯಾನೆ ಗೌಡರ ಸಂಘದ ಅಧ್ಯಕ್ಷ ಪುರಂದರ ಗೌಡ, ಲಿಂಗಪ್ಪ ಗೌಡ ಅಳಿಕೆ ಹಾಗೂ ಅರೆಭಾಷೆ ಅಕಾಡೆಮಿ ಸದಸ್ಯರಾದ ಚಂದ್ರಾವತಿ ಬಡ್ಡಡ್ಕ, ಲತಾಪ್ರಸಾದ್ ಕುದ್ದಾಜೆ, ಕಾರ್ಯಪ್ಪ ಪಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ತಾರನಾಥ ಕೊಟ್ಟಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅರೆಭಾಷೆ ಅಕಾಡೆಮಿ ಸದಸ್ಯರಾದ ಡಾ. ಜ್ಞಾನೇಶ್ ಎನ್.ಎ ಸ್ವಾಗತಿಸಿದರು. ಧರ್ಮಾವತಿ ಪಿ.ಬಿ ವಂದಿಸಿದರು. ಪೂಜಾಶ್ರೀ ವಿತೇಶ್ ಕೋಡಿ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಯಶವಂತ ಕುಡೆಕಲ್ಲು ಅವರ ಅಧ್ಯಕ್ಷತೆಯಲ್ಲಿ ಅರೆಭಾಷೆ ಕವಿಗೋಷ್ಠಿ ನಡೆಯಿತು.ಕವಿಗಳಾದ ಉದಯ ಭಾಸ್ಕರ್ ಸುಳ್ಯ, ಕುಸುಮಾಕರ ಅಂಬೆಕಲ್ಲು, ಜೀವನ್ ಪುರ ಮರ್ಕಂಜ, ಚಂದ್ರಾವತಿ ಬಡ್ಡಡ್ಕ, ಹೇಮಲತಾ ಕಜೆಗದ್ದೆ ಹಾಗೂ ಡಾ. ತಾರಾ ಗಣೇಶ್ ಇವರುಗಳು ಕವನ ವಾಚಿಸಿದರು. ಅರೆಭಾಷೆ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸ್ವರ ಬೆಟ್ಟಂಪ್ಪಾಡಿ ತಂಡದಿAದ ಅರೆಭಾಷೆ ನೃತ್ಯ, ಮಂಡೆಕೋಲು ಗ್ರಾಮದ ಪೇರಾಲು-ಅಂಬೋಟಿನ ಸಿದ್ಧವೇಶ, ರಮೇಶ್‌ ಮೆಟ್ಟಿನಡ್ಕರಿಂದ ಅರೆಭಾಷೆ ಹಾಡು, ಶ್ರೀ ಮೂಕಾಂಬಿಕಾ ಕಲ್ಬರಕ್ ಅಕಾಡೆಮಿ ರಿ.ಪುತ್ತೂರು ತಂಡದಿಸಿದ ಅರೆಭಾಷೆ ನೃತ್ಯರೂಪಕ ಕೆರೆಗೆದಾನ, ದಿನೇಶ್ ಸುಳ್ಯ (ದಿ.ಮ.) ತಂಡದಿAದ ಪೊಳ್ಮೆ ಕಾರ್ಯಕ್ರಮ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಸಂಯೋಜನೆಯನ್ನು ಅಕಾಡೆಮಿ ಸದಸ್ಯೆ ಲತಾಪ್ರಸಾದ್ ಕುದ್ರಾಜೆ ವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಚಿಣ್ಣರಲೋಕ ಮೋಕೆದ ಕಲಾವಿದೆರ್ ಸೇವಾ ಟ್ರಸ್ಟ್ (ರಿ) ಬಂಟ್ವಾಳ, ಚಿಣ್ಣರಲೋಕ ಸೇವಾ ಬಂಧು (ರಿ) ಬಂಟ್ವಾಳ ಇವರ ಸಂಯುಕ್ತ ಆಶ್ರಯದಲ್ಲಿ ಆರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಕರಾವಳಿ ಕಲೋತ್ಸವ – 2026 ಪ್ರಯುಕ್ತ ತುಳು, ಕೊಂಕಣಿ, ಬ್ಯಾರಿ ಹಾಗೂ ಅರೆಭಾಷೆ ಅಕಾಡೆಮಿಗಳ ಸಹಯೋಗದೊಂದಿಗೆ ಬಹುಸಂಸ್ಕೃತಿ ಉತ್ಸವ ಮತ್ತು ಆಹಾರ ಮೇಳ ಕಾರ್ಯಕ್ರಮ ನಡೆಯಿತು.



































































































Leave a Comment

Your email address will not be published. Required fields are marked *

error: Content is protected !!
Scroll to Top