ತೊಡಿಕಾನ : ಅಕ್ರಮ ಮರಳು ಸಂಗ್ರಹ ಪತ್ತೆ,ಪೊಲೀಸ್ ದಾಳಿ

,ತೊಡಿಕಾನ ಗ್ರಾಮದ ಶೆಟ್ಟಿಯಡ್ಕ ಎಂಬಲ್ಲಿ ತೋಟ ಒಂದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸುಳ್ಯ ಪೊಲೀಸರು ದಾಳಿ ನಡೆಸಿ ಸುಮಾರು 1.20 ಲಕ್ಷ ರೂಪಾಯಿ ಮೌಲ್ಯದ ಮರಳನ್ನು ವಸಪಡಿಸಿಕೊಂಡು ಆರೋಪಿಗಳ ಮೇಲೆ ಪ್ರಕರಣ ದಾಖಲಿಸಿಕೊಂಡ ಘಟನೆ ವರದಿಯಾಗಿದೆ.
ಪೆರಾಜೆ ಗ್ರಾಮದ ಮನು ಹಾಗೂ ಚೆಂಬು ಗ್ರಾಮದ ಆ್ಯಂಟನಿ ಎಂಬವರ ಮೇಲೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇ.8 ರಂದು ಮಧ್ಯಾಹ್ನ ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಸಂತೋಷ್ ಬಿ.ಪಿ. ರವರ ನೇತೃತ್ವದ ತಂಡ ದಾಳಿ ನಡೆಸಿದ್ದಾಗ ಕಾನೂನು ಬಾಹಿರವಾಗಿ ಪಯಸ್ವಿನಿ ನದಿಯಿಂದ ಮರಳನ್ನು ಕದ್ದು ಸಂಗ್ರಹ ಮಾಡಿಟ್ಟುಕೊಂಡು ಮಾರಾಟ ಮಾಡಿಕೊಂಡಿರುವುದಾಗಿ ಪೊಲೀಸರಿಗೆ ಮಾಹಿತಿ ಬಂದಿರುವುದಾಗಿ ತಿಳಿದು ಬಂದಿದೆ.



































































































Leave a Comment

Your email address will not be published. Required fields are marked *

error: Content is protected !!
Scroll to Top