ಸುಳ್ಯ ತಾಲೂಕಿನ ಕನಕಮಜಲು ಸಮೀಪ ಕಾರೊಂದು ಒಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮೇ 8 ರಂದು ವರದಿಯಾಗಿದೆ.
ಸುಳ್ಯ ಕಡೆಯಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದ್ದು,ಘಟನೆಯಿಂದ ಕಾರಿನಲ್ಲಿದ್ದ ಇಬ್ಬರು ಮಹಿಳಾ ಪ್ರಯಾಣಿಕರು ಸೇರಿ ನಾಲ್ವರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ತಂದು ಚಿಕಿತ್ಸೆಗೆ ದಾಖಲಿಸಲಾಗಿದೆ.
ಕಾರಿನಲ್ಲಿದ್ದ ಪ್ರಯಾಣಿಕರನ್ನು ಹೊರ ತೆಗೆಯುವಲ್ಲಿ ಸ್ಥಳೀಯರಾದ ಶಾಹುಲ್ ಮತ್ತು ಅಕೀಮ್ ರವರು ಸಹಕರಿಸಿದ್ದಾರೆ ಎಂದು ತಿಳಿದುಬಂದಿದೆ.
ಕನಕಮಜಲು : ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಾಲ್ವರು ಪ್ರಯಾಣಿಕರಿಗೆ ಗಾಯ





















































