ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವತಿಯಿಂದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನೇಮಿರಾಜ ಪಲ್ಲೋಡಿಯವರಿಗೆ ಸನ್ಮಾನ ಕಾರ್ಯಕ್ರಮ ಮೇ.9 ರಂದು ದೇಗುಲದ ಸಭಾಭವನದಲ್ಲಿ ನಡೆಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂ‌ರ್ ರವರು ನೇಮಿರಾಜ ಪಲ್ಲೋಡಿ ಮತ್ತು ಅವರ ಪತ್ನಿ ಶ್ರೀಮತಿ ಕವಿತಾ ನೇಮಿರಾಜ ಪಲ್ಲೋಡಿ ಅವರನ್ನು ಸನ್ಮಾನಿಸಿದರು. ವ್ಯವಸ್ಥಾಪನಾ ಸಮಿತಿಯ ಗೌರವ ಸಲಹೆಗಾರರಾದ ಪರಮೇಶ್ವರ ಬಿಳಿಮಲೆ, ಉಮೇಶ್ ಬುಡೆಂಗಿ ಬಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸತ್ಯನಾರಾಯಣ ಭಟ್ ಕಾಯಂಬಾಡಿ, ಧರ್ಮಪಾಲ ಮರಕ್ಕಡ, ಸಂತೋಷ್ ಕುಮಾರ್ ರೈ ಪಲ್ಲತ್ತಡ್ಕ, ಮಾಯಿಲಪ್ಪ ಗೌಡ ಎಣ್ಣೂರು ಪಟ್ಟೆ, ಶ್ರೀಮತಿ ಪವಿತ್ರ ಮಲ್ಲೆಟ್ಟಿ,ಶ್ರೀಮತಿ ಮಾಲಿನಿ ಕುದ್ವ ಉಪಸ್ಥಿತರಿದ್ದರು.



































































































Leave a Comment

Your email address will not be published. Required fields are marked *

error: Content is protected !!
Scroll to Top