ಮನುಷ್ಯರು ಪರೋಪಕಾರಿಯಾಗಿ ಬಾಳಬೇಕು,ಹಿಂದು ಧರ್ಮ ಅತ್ಯಂತ ಶ್ರೇಷ್ಠ ಅದನ್ನು ಆಚರಣೆ ಮಾಡಿ ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯ ಎಂದು
ಶೃಂಗೇರಿ ಜಗದ್ಗುರುಗಳಾದ ವಿಧುಶೇಖರ ಭಾರತೀ ಸ್ವಾಮೀಜಿಗಳು ಹೇಳಿದರು.
ಅಜ್ಜಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸುಮಾರು74 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀ ಮಾತಾ ಸಭಾಭವನದ ಲೋಕಾರ್ಪಣೆ ಸಮಾರಂಭದಲ್ಲಿ ದೀಪ ಪ್ರಜ್ವಲನೆ ಮಾಡಿ ಆಶೀರ್ವಾಚನ ಮಾಡಿದರು.
ಈ ಸಂದರ್ಭದಲ್ಲಿ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ಕು.ಭಾಗೀರಥಿ ಮುರುಳ್ಯ, ಕರ್ನಾಟಕ ಬ್ಯಾಂಕ್ ಅಧ್ಯಕ್ಷ ಪ್ರದೀಪ್ ಕುಮಾರ್ ಪಂಜ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರ ಪುತ್ರಿ ಉಮಾದೇವಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಮಹಿಷಮರ್ದಿನೀ ಸೇವಾ ಟ್ರಸ್ಟ್ ಅಧ್ಯಕ್ಷ ಶಿವರಾಯ ಬಯಂಬು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಭಾಸ್ಕರ ರಾವ್ ಬಯಂಬು ಅಭಿನಂದನಾ ಪತ್ರ ವಾಚಿಸಿದರು.
ಸಭಾಭವನ ಲೋಕಾರ್ಪಣಾ ಸಮಿತಿ ಪ್ರಧಾನ ಸಂಚಾಲಕ ಸುಭೋದ್ ಶೆಟ್ಟಿ ಮೇನಾಲ ವಂದಿಸಿದರು.
ಮನುಷ್ಯರು ಪರೋಪಕಾರಿಯಾಗಿ ಬಾಳಬೇಕು : ಶೃಂಗೇರಿ ಜಗದ್ಗುರುಗಳಾದ ವಿಧುಶೇಖರ ಭಾರತೀ ಸ್ವಾಮೀಜಿಗಳು





















































