ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಪೆರಾಜೆ ಸಮೀಪ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿ ಸ್ಕೂಟಿ ಸವಾರನಿಗೆ ಗಂಭೀರ ಗಾಯವಾದ ಘಟನೆ ಮೇ 15ರಂದು ವರದಿಯಾಗಿದೆ.
ಗಾಯಗೊಂಡ ವ್ಯಕ್ತಿಯ ಸ್ಥಳೀಯ ಬಿಳಿಯಾರು ನಿವಾಸಿಯಾಗಿದ್ದು ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ತಂದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆಯೊಯ್ಯಲಾಗಿದೆ ಎಂದು ತಿಳಿದುಬಂದಿದೆ.
ಮಂಡ್ಯ ಮೂಲದವರ ಕಾರು ಮಡಿಕೇರಿ ಕಡೆಯಿಂದ ಸುಳ್ಯದತ್ತ ಬರುತ್ತಿದ್ದ ಸಂದರ್ಭ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಪೆರಾಜೆ : ಸ್ಕೂಟಿ ಕಾರು ಅಪಘಾದಲ್ಲಿ ಸ್ಕೂಟಿ ಸವಾರ ಗಂಭೀರ





















































