ಸುಳ್ಯದ ಗೌಡರ ಯುವ ಸೇವಾ ಸಂಘ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ ಮತ್ತು ಮಹಿಳಾ ಘಟಕ, ತರುಣ ಘಟಕ, ನಗರ ಹಾಗೂ ಗ್ರಾಮ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ, ಡಾ| ರೇಣುಕಾಪ್ರಸಾದ್ ಕೆ.ವಿ. ಮತ್ತು ಮನೆಯವರು ಕೊಡುಗೆ ನೀಡಿದ ವಧು – ವರರ ನವೀಕೃತ ಗೃಹದ ಶುಭಾರಂಭ, ಮೇ ೨೩ರಂದು ಸುಳ್ಯದ ಕೊಡಿಯಾಲಬೈಲಿನಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್ ಹೇಳಿದರು.
ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇದೇ ಸಂದೃಭದಲ್ಲಿ ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಪಿ.ಸಿ.ಜಯರಾಮರಿಗೆ ಸನ್ಮಾನ, ೫೦ ವರ್ಷದ ದಾಂಪತ್ಯ ಜೀವನ ಮುನ್ನಡೆಸುತ್ತಿರುವ ದಂಪತಿಗಳಿಗೆ ಗೌರವಾರ್ಪಣೆ, ಪಿ.ಯುಸಿ. ಹಾಗೂ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.೯೫ಕ್ಕಿಂತ ಅಂಕ ಪಡೆದ ಸಮಾಜದ ವಿದ್ಯಾರ್ಥಿಗಳಿಗೆ ಅಭಿನಂದನೆ ಹಾಗೂ ಅರೆಭಾಷೆ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಅರೆಭಾಷೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.
ಸಮಾರಂಭವನ್ನು ಮಾಜಿ ಸಚಿವ ಹಾಗೂ ಹಾಲಿ ಶಾಕರಾಗಿರುವ ಜಿ.ಟಿ. ದೇವೆಗೌಡರು ಉದ್ಘಾಟಿಸುವರು. ಬಳಿಕ ಸನ್ಮಾನ ಕಾರ್ಯಕ್ರಮ ನೆರವೇರಿಸುವರು. ನವೀಕೃತ ವಧು – ವರರಗೃಹದ ಉದ್ಘಾಟನನೆಯನ್ನು ಕೊಡುಗೆ ನೀಡಿದ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ| ರೇಣುಕಾಪ್ರಸಾದ್ ಕೆ.ವಿ. – ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಬಿ. ಕಮಿಟಿ ಉಪಾಧ್ಯಕ್ಷೆ ಡಾ| ಜ್ಯೋತಿ ಆರ್. ಪ್ರಸಾದ್ ಉದ್ಘಾಟಿಸುವರು.
ಗೌಡರ ಯುವ ಸೇವಾ ಸಂಘದ ಅಧ್ಯಕ್ಷರಾದ ಪಿ. ಎಸ್. ಗಂಗಾಧರ ಸಭಾ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಗೌಡ ಸಮುದಾಯ ಭವನ ನಿರ್ವಹಣಾ ಸಮಿತಿ ಅಧ್ಯಕ್ಷ ಎ.ವಿ. ತೀರ್ಥರಾಮ, ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಸಿ. ಸದಾನಂದ, ಕೊಡಿಯಾಲಬೈಲು ಎಂ.ಜಿ.ಎಂ. ಶಾಲಾ ಸಂಚಾಲಕ ದೊಡ್ಡಣ್ಣ ಬರೆಮೇಲು, ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ಗೌಡ ತರುಣಾ ಘಟಕದ ಅಧ್ಯಕ್ಷೆ ಪ್ರೀತಮ್ ಡಿ.ಕೆ. ಭಾಗವಹಿಸುವರು.
ಸಭಾ ಕಾರ್ಯಕ್ರಮದ ಬಳಿಕ ಮಧ್ಯಾಹ್ನ ೨ ರಿಂದ ಅರೆಭಾಷೆ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಅರೆಭಾಷೆ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಮೂಡಿಬರುವುದು.
ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ನಿರ್ದೇಶಕರಾದ ಜಯರಾಮ ದೇರಪ್ಪಜ್ಜನಮನೆ, ಗೌಡ ಸಂಘದ ಕಾರ್ಯದರ್ಶಿ ತೀರ್ಥರಾಮ ಅಡ್ಕಬಳೆ, ಉಪಾಧ್ಯಕ್ಷ ಯತಿರಾಜ ಭೂತಕಲ್ಲು, ಮಹಿಳಾ ಘಟಕದ ಅಧ್ಯಕ್ಷೆ ವಿನುತಾ ಪಾತಿಕಲ್ಲು, ತರುಣ ಘಟಕದ ಅಧ್ಯಕ್ಷಪ್ರೀತಮ್ ಡಿ.ಕೆ, ನಗರ ಘಟಕ ಅಧ್ಯಕ್ಷ ರಾಕೇಶ್ ಕುಂಠಿಕಾನ, ಕಾರ್ಯದರ್ಶಿ ರಾಧಾಕೃಷ್ಣ ಕುಂಟಿಕಾನ, ಮಾಧ್ಯಮ ಸಂಯೋಜಕ ಸುಪ್ರೀತ್ ಮೋಂಟಡ್ಕ ಇತರರು ಉಪಸ್ಥಿತರಿದ್ದರು.
ಕೊಡಿಯಾಲಬೈಲು : ಮೇ.23ಕ್ಕೆ ಗೌಡ ಸಮುದಾಯ ಭವನದಲ್ಲಿ ವಧು ವರರ ನವೀಕೃತ ಗೃಹ ಉದ್ಘಾಟನೆ





















































