ಅರಂತೋಡಿನಲ್ಲಿ ಕ್ಲಸ್ಟರ್ ಮಟ್ಟಡ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನ

ಅರಂತೋಡು ಕ್ಲಸ್ಟರ್ ಮಟ್ಟದ ಸರಕಾರಿ ಪ್ರಾಥಮಿಕ ಶಾಲಾ ದಾಖಲಾತಿ ಆಂದೋಲನವು ಮೇ 20 ರಂದು ಅರಂತೋಡು ಗ್ರಾಮ ಪಂಚಾಯತಿ ವಠಾರದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಸುರೇಶ್ ಉಳುವಾರು ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್.ಹರಗಿ  ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿ ಸರಕಾರಿ ಶಾಲೆಗಳಲ್ಲಿ ಆಂಗ್ಲಮಾಧ್ಯಮದೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು. ಸಮವಸ್ತ್ರ, ಪುಸ್ತಕ ಬಿಸಿಯೂಟ, ಎಲ್ಲವು ಉಚಿತವಾಗಿ ನೀಡಲಾಗುತ್ತಿದೆ. ಆದುದರಿಂದ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಬೇಕೆಂದರು. ಶಾಲಾ ಮುಖ್ಯೋಪಾಧ್ಯಾಯ ಗೋಪಲಕೃಷ್ಣ ಬನ ಕಾರ್ಯಕ್ರಮದ ಉದ್ದೇಶದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೊಷ್ ಕುತ್ತಮೊಟ್ಟೆ, ಕೆಡಿಪಿ ಸದಸ್ಯ ಅಶ್ರಫ್ ಗುಂಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ನಾಯ್ಕ್, ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಅಮೀರ್ ಕುಕ್ಕುಂಬಳ, ಕ್ಲಸ್ಟರ್ ವ್ಯಾಪ್ತಿಯ ಶಾಲೆಗಳ ಮುಖ್ಯೋಪಾಧ್ಯಾಯರು ಶಾಲಾ ಸಹಶಿಕ್ಷಕರು, ಪೋಷಕರು, ಮಕ್ಕಳು ಭಾಗವಹಿಸಿದರು. ಶಿಕ್ಷಣ ಸಂಯೋಜಕಿ ಮಮತಾ ವಂದಿಸಿದರು. ಅರಂತೋಡು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಅಧ್ಯಾಪಕ ಧನಂಜಯ ಮೇರ್ಕಜೆ ಕಾರ್ಯಕ್ರಮ ನಿರೂಪಿಸಿದರು





































































































Leave a Comment

Your email address will not be published. Required fields are marked *

error: Content is protected !!
Scroll to Top