ಆಫ್ರಿಕಾ ದೇಶಗಳಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಭಾರತದಲ್ಲಿ ಯಾವುದೇ ಎಬೋಲಾ ಪ್ರಕರಣಗಳು ಪತ್ತೆಯಾಗಿಲ್ಲವಾದರೂ, ಮುನ್ನೆಚ್ಚರಿಕಾ ಕ್ರಮವಾಗಿ ಈ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿರಬೇಕು ಮತ್ತು ರೋಗಲಕ್ಷಣ ಕಂಡುಬಂದರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಮಹಾಮಾರಿ ಎಬೋಲಾ ರೋಗ ಭೀತಿ.ಆರೋಗ್ಯ ಇಖಾಖೆಯಿಂದ ಕಟ್ಟು ನಿಟ್ಟಿನ ಕ್ರಮ!






















































