ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬ ವದಂತಿಯನ್ನು ಸಚಿವ ಪರಮೇಶ್ವರ್ ತಳ್ಳಿ ಹಾಕಿದ್ದಾರೆ.
ಶನಿವಾರ ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ದರ್ಶನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ಸುದ್ದಿ ಸಂಪೂರ್ಣ ಸುಳ್ಳು. ಜೈಲಿನಲ್ಲಿ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಜೈಲಿನ ಅಧಿಕಾರಿಗಳು ನನಗೆ ಮೌಖಿಕವಾಗಿ ಮಾಹಿತಿ ನೀಡಿದ್ದಾರೆ,” ಎಂದು ಸ್ಪಷ್ಟಪಡಿಸಿದ್ದಾರೆ.
ದರ್ಶನ್ ಆತ್ಮಹತ್ಯೆ ಯತ್ನ?! ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು ಗೊತ್ತಾ?






















































