ರಾಜ್ಯ ಸರ್ಕಾರಿ ನೌಕರರಿಗೆ ಶೀಘ್ರವೇ ಕೇಂದ್ರ ಸರ್ಕಾರ ಮಾದರಿಯ ವೇತನ

ರಾಜ್ಯದ ಎಲ್ಲಾ ಸರ್ಕಾರಿ ನೌಕರರು ಸದ್ಯದಲ್ಲಿಯೇ ಕೇಂದ್ರ ಸರ್ಕಾರದ ಮಾದರಿಯಲ್ಲಿ ವೇತನವನ್ನು ಪಡೆದುಕೊಳ್ಳಲಿದ್ದು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಪ್ರಯತ್ನಗಳು ಸಾಗುತ್ತಿವೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರು ತಿಳಿಸಿದ್ದಾರೆ.
ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಎರಡು ದಿನಗಳ ರಾಜ್ಯ ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಮಾದರಿಯ ವೇತನವನ್ನು ಜಾರಿಗೊಳಿಸಲು ಹಾಗೂ ಎನ್ .ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ, ಹಳೇ ಪಿಂಚಣಿ ಯೋಜನೆ (OPS) ಯನ್ನು ಮರು ಜಾರಿಗೊಳಿಸಲು ಸರ್ಕಾರದ ಮೇಲೆ ಕಳೆದ ಕೆಲವು ವರ್ಷಗಳಿಂದ ಒತ್ತಡ ಹೇರಲಾಗುತ್ತಿದೆ.
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರಿ ನೌಕರರಿಗೆ ಯಾವುದೇ ಹೋರಾಟವಿಲ್ಲದೆಯೇ 6ನೇ ಮತ್ತು 7ನೇ ವೇತನ ಆಯೋಗಗಳನ್ನು ಜಾರಿಗೊಳಿಸಿದ್ದರು. ಈ ಸರ್ಕಾರ ಇನ್ನೂ ಎರಡು ವರ್ಷ ಅಧಿಕಾರದಲ್ಲಿರಲಿದ್ದು, ಅಷ್ಟರೊಳಗೆ ಕೇಂದ್ರ ಮಾದರಿಯ ವೇತನವನ್ನು ನೌಕರರು ಪಡೆದುಕೊಳ್ಳಲಿದ್ದಾರೆ.
ಹಳೆ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಶೀಘ್ರವಾಗಿ ವರದಿ ತರಿಸಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.







































































































Leave a Comment

Your email address will not be published. Required fields are marked *

error: Content is protected !!
Scroll to Top