ರಾಜ್ಯದ ನೂತನ ಸಿಎಂ ಆಗಿ ಉಪ ಮುಖ್ಯ ಮಂತ್ರಿ,ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ.ಕೆ ಶಿವಕುಮಾರ್ ಕೆಲ ದಿನಗಳಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.
ದೆಹಲಿಯಲ್ಲಿ ನಡೆದ ಹೈಕಮಾಂಡ್ ನೇತೃತ್ವದ ಮಹತ್ವದ ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಗುರುವಾರದ ಮೊದಲು ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ.
ದೆಹಲಿಯಲ್ಲಿ ನಡೆದ ಹೈಕಮಾಂಡ್ ಮೀಟಿಂಗ್ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಎನ್‌ಡಿಟಿವಿ, ಟೈಮ್ಸ್ ನೌ ಮತ್ತು ಇಂಡಿಯಾ ಟುಡೇ ಸೇರಿದಂತೆ ಪ್ರಮುಖ ಮಾಧ್ಯಮಗಳು ವರದಿ ಮಾಡಿವೆ.
ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಮೀಟಿಂಗ್‌ನಲ್ಲಿ ರಾಜ್ಯಸಭಾ ಚುನಾವಣೆಯ ಬಗ್ಗೆ ಮುಖ್ಯ ಚರ್ಚೆ ನಡೆದಿದೆ. ಆದರೆ ನಾಯಕತ್ವ ಬದಲಾವಣೆಯ ಬಗ್ಗೆಯೂ ಗುಪ್ತ ಚರ್ಚೆ ನಡೆದಿದೆ ಎಂದು ಮೂಲಗಳು ಹೇಳುತ್ತಿವೆ. ಸಿದ್ದರಾಮಯ್ಯ ಅವರು ತಮ್ಮ ಆಪ್ತರೊಂದಿಗೆ ದೆಹಲಿಯಲ್ಲಿ ಕೆ.ಜಿ. ಜಾರ್ಜ್ ನಿವಾಸದಲ್ಲಿ ಡಿನ್ನರ್ ಮೀಟಿಂಗ್ ನಡೆಸುತ್ತಿರುವುದು ಈ ಟ್ವಿಸ್ಟ್‌ಗೆ ಇನ್ನಷ್ಟು ಬಲ ನೀಡಿದೆ.
ಪಕ್ಷದ ನಿಲುವು ಹೈಕಮಾಂಡ್ ನಾಯಕರು ‘ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ’ ಎಂದು ಹೇಳಿದ್ದರೂ, ಒಳನೋಟದ ಮಾಹಿತಿಗಳು ಬೇರೆಯೇ ಸಂದೇಶ ನೀಡುತ್ತಿವೆ. ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವ ಯೋಜನೆಯು ಹೈಕಮಾಂಡ್‌ನಲ್ಲಿ ಚರ್ಚೆಯಲ್ಲಿದೆ ಎಂದು ಹೇಳಲಾಗುತ್ತಿದೆ.
ರಾಜಕೀಯ ಪರಿಣಾಮ ಈ ಬದಲಾವಣೆಯು ಕರ್ನಾಟಕದ ರಾಜಕೀಯ ಸಮೀಕರಣಗಳನ್ನು ಪೂರ್ಣವಾಗಿ ಬದಲಾಯಿಸುವ ಸಾಧ್ಯತೆ ಇದೆ. ಸಿದ್ದರಾಮಯ್ಯ ಅವರು ರಾಜ್ಯಸಭೆಗೆ ಹೋಗುವುದರಿಂದ ಪಕ್ಷದಲ್ಲಿ ಹೊಸ ಶಕ್ತಿ ಸಂಗ್ರಹವಾಗುವ ನಿರೀಕ್ಷೆಯಿದೆ. ಆದರೆ ಈ ವದಂತಿಗಳು ಇನ್ನು ಅಧಿಕೃತಗೊಂಡಿಲ್ಲ .ರಾಜಕೀಯ ನಿರ್ಧಾರಗಳು ಕ್ಷಣ ಕ್ಷಣ ಬೇಕಾದರೂ ಬದಲಾಗಬಹುದು
ಸದ್ಯದಲ್ಲಿಯೇ ಡಿ.ಕೆ ಶಿವಕುಮಾರ್ ರಾಜ್ಯದ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ?























































