ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿರ್ಧಾರವಾಗಿತ್ತು
ಆದರೆ ಪ್ರಜಾಪ್ರಭುತ್ವದ ನಿಯಮದಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ಸಿಎಂ ಆಯ್ಕೆ ಅಧಿಕೃತವಾಗಿ ನಡೆದಿದೆ.
ಜೂನ್ 3ರಂದು ಸಂಜೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಭವನದಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಈ ಬಗ್ಗೆ ಕೆಪಿಸಿಸಿ ಕಾರ್ಯಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಜೂ.3ರಂದು ಮುಖ್ಯಮಂತ್ರಿ ಯಾಗಿ ಡಿ.ಕೆ.ಶಿ ಪ್ರಮಾಣ. ವಚನ ಸ್ವೀಕಾರ
























































