ಬಡ್ಡಡ್ಕ: ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯಿಂದ ಬಡ್ಡಡ್ಕ- ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಗುದ್ದಲಿ ಪೂಜೆ
ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ್ ಭಂಡಾರಿಯವರ ಶಾಸಕರ ನಿಧಿಯ ಅನುದಾನದಿಂದ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡ್ಡಡ್ಕ – ರಂಗತ್ತಮಲೆ ರಸ್ತೆ ಕಾಂಕ್ರಿಟೀಕರಣಕ್ಕೆ ಇಂದು ಗುದ್ದಲಿಪೂಜೆ ನಡೆಯಿತು. ಮಾಜಿ ಜಿಲ್ಲಾ ಪರಿಷತ್ ಸದಸ್ಯ ದೇವಪ್ಪ ನಾಯ್ಕ ಹೊನ್ನೆಡಿ ಹಾಗೂ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಸದಸ್ಯ ತೇಜಕುಮಾರ್ ಬಡ್ಡಡ್ಕ ಗುದ್ದಲಿ ಪೂಜೆ ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಭವಾನಿಶಂಕರ್ ಕಲ್ಮಡ್ಕ, ಸುಳ್ಯ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ […]










