ಹಾಸನದಲ್ಲಿ ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣವೊಂದು ವರದಿಯಾಗಿದೆ. ಪದವಿ ಓದುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್ ಕೊಡುವುದಾಗಿ ಕರೆದೊಯ್ದು, ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದು, ಗಂಭೀರ ಗಾಯಗೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಆತನ ಇಬ್ಬರು ಸ್ನೇಹಿತರನ್ನೂ ಹುಡುಕುತ್ತಿದ್ದಾರೆ. ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಯತ್ನ
























































