ಕಾಂಗ್ರೆಸ್ ಹೈಕಮಾಂಡ್ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹತ್ವದ CWC ಹುದ್ದೆ ನೀಡಿದೆ.
ರಾಜ್ಯಸಭೆ ಅಥವಾ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ನೀಡಿದ್ದ ಆಫರ್ ತಿರಸ್ಕರಿಸಿದ್ದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರ್ಕಿಂಗ್ ಕಮಿಟಿ (CWC) ಯ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ (AICC) ಯಿಂದ ಈ ನೇಮಕಾತಿ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷರು ತಕ್ಷಣದ ಪರಿಣಾಮಕ್ಕೆ ಈ ನೇಮಕ ಮಾಡಿರುವುದಾಗಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸಹಿ ಮಾಡಿರುವ ಆದೇಶದಲ್ಲಿ ತಿಳಿಸಲಾಗಿದೆ.
ಸಿದ್ದರಾಮಯ್ಯಗೆ ಕಾಂಗ್ರೆಸ್ ನಲ್ಲಿ CWC ಸದಸ್ಯ ಹುದ್ದೆ
























































