ಜೂನ್ 9 ರಂದು ಜಿಫ್ರಿ ತಂಘಳ್ ರವರಿಂದ ಅರಂತೋಡು ಮಸೀದಿಯ ಮೇಲಂತಸ್ತು ಮತ್ತು ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸ

ಅರಂತೋಡು : ಬದ್ರಿಯಾ ಜುಮಾ ಮಸೀದಿ ಅರಂತೋಡು ಇದರ ಮೇಲಂತಸ್ತು ನಿರ್ಮಾಣ ಕಾಮಗಾರಿಗೆ ಹಾಗೂ ನುಸ್ರತುಲ್ ಇಸ್ಲಾಂ ಮದರಸದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಜೂನ್ 9 ರಂದು ಬೆಳಗ್ಗೆ ಗಂಟೆ 9.30ಕ್ಕೆ ಅರಂತೋಡು ಮಸೀದಿ ವಠಾರದಲ್ಲಿ ನಡೆಯಲಿದೆ. ನೂತನ ಮದರಸ ಕಟ್ಟಡಕ್ಕೆ ಶಿಲಾನ್ಯಾಸವನ್ನು ಸಮಸ್ತ ಕೇರಳ ಜಂಇತ್ತುಲ್ ಉಲಮಾ ಅಧ್ಯಕ್ಷರಾದ ಸಯ್ಯಿದ್ ಉಲಮಾ, ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಘಳ್ ನೆರವೇರಿಸಲಿದ್ದು, ಕರ್ನಾಟಕ ಸರಕಾರದ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ ಶಹೀದ್ ತೆಕ್ಕಿಲ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸ್ಥಳೀಯ ಖತೀಬರಾದ ಬಹು| ಆಸಿಫ್ ಅಝ್ಹರಿ ಉಸ್ತಾದ್ ಸಹಿತ ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಅರಂತೋಡು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ತಿಳಿಸಿದ್ದಾರೆ.











































































































Leave a Comment

Your email address will not be published. Required fields are marked *

error: Content is protected !!
Scroll to Top