ಹೊಂಡ ಗುಂಡಿಗಳಿಂದ ಕೂಡಿದ ಬಳ್ಪ ಗ್ರಾಮದ ಎಡೋನಿ ರಸ್ತೆ

ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಇತ್ತೀಚೆಗೆ ಮೋರಿ ನಿರ್ಮಾಣ ಮಾಡಿದ್ದು, ಕಾಮಗಾರಿ ಕಳಪೆಯಿಂದಾಗಿ ದೊಡ್ಡ ಹೊಂಡಗಳು ನಿರ್ಮಾಣವಾಗಿದ್ದು, ಸವಾರರು ಗಾಯಗೊಂಡ ಘಟನೆಯೂ ನಡೆದಿದೆ. ಈ ಬಗ್ಗೆ ಬಳ್ಳ ಶ್ರೀ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ. ದೇವಿ ಪ್ರಸಾದ ಕಾನತ್ತೂರ್ ರವರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮತ್ತು ಕಾಮಗಾರಿ ಗುತ್ತಿಗೆದಾರರಿಗೆ ಕರೆ ಮಾಡಿ ಎರಡು ದಿನಗಳ ಒಳಗೆ ದುರಸ್ತಿಪಡಿಸದಿದ್ದರೆ ಲೋಕಾಯುಕ್ತಕ್ಕೆ ದೂರು ನೀಡುವುದಾಗಿ ತಿಳಿಸಿರುತ್ತಾರೆ. ಗುತ್ತಿಗೆದಾರರು ಸ್ಥಳಕ್ಕಾಗಮಿಸಿ ಕೂಡಲೇ ರಸ್ತೆ ದುರಸ್ತಿಪಡಿಸಿಕೊಡುವ ಭರವಸೆ ನೀಡಿರುವುದಾಗಿ ಡಾ. ದೇವಿಪ್ರಸಾದ್ ಕಾನತ್ತೂರ್ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಬಳ್ಳ ವಿಷ್ಣುಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಉಮೇಶ್ ಬುಡೆಂಗಿ ಮತ್ತು ಕೋಶಾಧಿಕಾರಿಗಳಾದ ಸಂತೋಷ ಕುಮಾರ್ ರೈ ಪಲತಡ್ಕ ಸ್ಥಳದಲ್ಲಿದ್ದರು.















































































































Leave a Comment

Your email address will not be published. Required fields are marked *

error: Content is protected !!
Scroll to Top