ಬಳ್ಪ ಗ್ರಾಮದ ಎಡೋನಿ ಎಂಬಲ್ಲಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿರುವ ಹಿನ್ನಲೆಯಲ್ಲಿ
ಬಳ್ಪ ಶ್ರೀ ವಿಷ್ಣು ಮೂರ್ತಿ ದೈವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ದೇವಿ ಪ್ರಸಾದ್ ಕಾನತ್ತೂರು ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹಾಗೂ ಗುತ್ತಿಗೆ ದಾರರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ರಸ್ತೆ ದುರಸ್ತಿ ಪಡಿಸುವಂತೆ ಆಗ್ರಹಿಸಿದ ಹಿನ್ನಲೆಯಲ್ಲಿ ದುರಸ್ತಿ
ಕಾರ್ಯ ಆರಂಭಿಸಲಾಗಿದೆ.
ಇಲ್ಲಿ ಮೋರಿ ಕಾಮಗಾರಿಯಿಂದ ಮತ್ತು ಡಾಮರು ಕಿತ್ತು ಹೋಗಿ ಹೊಂಡಗುಂಡಿ ನಿರ್ಮಾಣವಾಗಿ ಸಂಚಾರಕ್ಕೆ
ತೀವ್ರ ಸಮಸ್ಯೆಯಾಗಿತ್ತು.ಅಲ್ಲದೆ ಆಗಾಗ ಅಪಘಾತ ಸಂಭವಿಸುತ್ತಿತ್ತು.
ರಸ್ತೆ ದುರಸ್ತಿ ಕಾಮಗಾರಿ ಆರಂಭಿಸಿದ ಹಿನ್ನಲೆಯಲ್ಲಿ ಸ್ಥಳೀಯರು ಡಾ.ದೇವಿಪ್ರಸಾದ್ ಕಾನತ್ತೂರು ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಬಳ್ಪ ಗ್ರಾಮದ ಎಡೋನಿ ರಾಜ್ಯ ಹೆದ್ದಾರಿ ದುರಸ್ತಿ ಕಾರ್ಯ ಆರಂಭ



























































