ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ, ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಯ ಇವುಗಳ ಜಂಟಿ ಆಶ್ರಯದಲ್ಲಿ ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನ ಹೆಚ್ಚುವರಿ ಕೊಠಡಿ ಉದ್ಘಾಟನೆ ಹಾಗೂ 2024 – 25 ನೇ ಸಾಲಿನಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ವತಿಯಿಂದ ನಿರ್ಮಾಣಗೊಂಡ ಶೌಚಾಲಯ ಉದ್ಘಾಟನಾ ಕಾರ್ಯಕ್ರಮ ಜೂ.16 ರಂದು ಬೆಳಗ್ಗೆ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ನೂತನ ಕೊಠಡಿಯನ್ನು ಉದ್ಘಾಟಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಎಸ್ ಹರಗಿ ಶೌಚಾಲಯ ಉದ್ಘಾಟಿಸಿದರು.
ಸೂಡ ಅಧ್ಯಕ್ಷ ಮುಸ್ತಫಾ,ಸುಳ್ಯ ಕ್ಷೇತ್ರ ಸಮನ್ವಯಾಧಿಕಾರಿ ಶೀತಲ್ ಯು.ಕೆ, ಸಿ.ಆರ್.ಪಿ ಮಮತಾ ಸುಳ್ಯ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ರವಿರಾಜ್, ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಅಶೋಕ್ ಪ್ರಭು, ಅಮೃತಭವನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ರೈ, ಸಂಚಾಲಕ
ಸಂಶುದ್ದೀನ್, ಹಿರಿಯ ವಿದ್ಯಾರ್ಥಿ ಸಂಘದ ಸದಸ್ಯೆ ಸುಸ್ಮಿತಾ ಜಾಕೆ, ಸುಮತಿ ನಾಯರ್, ಅಭಿಯಂತರರಾದ ಕೃಷ್ಣ ರಾವ್, ನಿವೃತ್ತ ಸರಕಾರಿ ನೌಕರರ ಸಂಘದ ಸದಸ್ಯ ರಾಮಚಂದ್ರ ಪಲ್ಲತ್ತಡ್ಕ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಗೋಕುಲ್ ದಾಸ್, ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಪಾರೆಪ್ಪಾಡಿ ಸ್ವಾಗತಿಸಿ, ಸಹಶಿಕ್ಷಕಿ ಹೇಮಲತಾ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಸುನಂದಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ : ಶಾಲಾ ಕೊಠಡಿ ಮತ್ತು ಶೌಚಾಲಯ ಉದ್ಘಾಟನೆ



























































