ಬೆಂಗಳೂರು: ರಾಜ್ಯ ಒಕ್ಕಲಿಗ ಸಂಘದ ಕೃಷ್ಣಪ್ಪ ರಂಗಮ್ಮ ಎಜುಕೇಷನ್ ಟ್ರಸ್ಟ್, 2025-26ನೇ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿನಲ್ಲಿ ಶೇ.95ಕ್ಕಿಂತ ಅಧಿಕ ಅಂಕ ಗಳಿಸಿರುವ ಒಕ್ಕಲಿಗ ಸಮುದಾಯ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿ, ಪಾಲಕರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾಭ್ಯಾಸದ ಶಾಲೆ/ಕಾಲೇಜಿನ ಹೆಸರು, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿಯ ದೃಢೀಕೃತ ನಕಲು ಪ್ರತಿ, ಬ್ಯಾಂಕ್ ಖಾತೆ ವಿವರ ಒಳಗೊಂಡ ಜೆರಾಕ್ಸ್ ಪ್ರತಿಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸಬೇಕು. ಭರ್ತಿ ಮಾಡಿದ ಅರ್ಜಿಯನ್ನು ಪ್ರತಿಭಾ ಪುರಸ್ಕಾರ ವಿಭಾಗ, ನಂ.148, ನಾಡಪ್ರಭು ಕೆಂಪೇಗೌಡ ಭವನ, ರಾಜ್ಯ ಒಕ್ಕಲಿಗರ ಸಂಘ, ಕೆ.ಆರ್. ರಸ್ತೆ, ವಿ.ವಿ. ಪುರ, ಬೆಂಗಳೂರು-04 ವಿಳಾಸಕ್ಕೆ ಜು.2ರೊಳಗೆ ಕಳುಹಿಸಬೇಕು.
ಒಕ್ಕಲಿಗ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ





























































