ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಅಂಜಲಿ ಮಾಂಟೆಸ್ಸೋರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.
ಗ್ರಂಥಪಾಲಕಿ ಸಾವಿತ್ರಿ ಕಣೆಮರಡ್ಕ ಕಾರ್ಯಕ್ರಮವನ್ಬು ಉದ್ಘಾಟಿಸಿ ಮಕ್ಕಳಿಗೆ ಯೋಗಾಭ್ಯಾಸವನ್ನು ನಡೆಸಿಕೊಟ್ಟು, ಯೋಗದ ಮಹತ್ವ ಹಾಗೂ ಅದರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಸಿದರು.
ಅಂಜಲಿ ಮಾಂಟೆಸ್ಸೋರಿ ಶಾಲೆಯ ಸಂಚಾಲಕರಾದ ಗೀತಾಂಜಲಿ ಟಿ.ಜಿ. ಅವರು ಮಕ್ಕಳಿಗೆ ಶುಭ ಹಾರೈಸಿ, “ಯೋಗವು ಮನಸ್ಸು, ಆತ್ಮ ಮತ್ತು ದೇಹದ ಸಮತೋಲನಕ್ಕೆ ಅತ್ಯಂತ ಅಗತ್ಯವಾಗಿದೆ” ಎಂದು ತಿಳಿಸಿದರು.
ನಿವೃತ್ತ ಪ್ರಾಧ್ಯಾಪಕರಾದ ರಾಮಚಂದ್ರ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ ಯೋಗವು ಉತ್ತಮ ಆರೋಗ್ಯ, ಏಕಾಗ್ರತೆ ಮತ್ತು ಶಿಸ್ತುಬದ್ಧ ಜೀವನಕ್ಕೆ ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಸಂಗೀತಾ ಕಾರ್ಯಕ್ರಮ ನಿರೂಪಿಸಿದರು . ಶ್ವೇತಾ ಸ್ವಾಗತಿಸಿದರು‌.
ಯೋಗ ದಿನಾಚರಣೆಯ ಮೂಲಕ ಮಕ್ಕಳು ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯಕ್ಕಾಗಿ ಯೋಗದ ಮಹತ್ವವನ್ನು ಅರಿತುಕೊಂಡು ಉತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.



















































































































Leave a Comment

Your email address will not be published. Required fields are marked *

error: Content is protected !!
Scroll to Top