ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಸತ್ತು ಚುನಾವಣೆಯ ಮೂಲಕ ಮಂತ್ರಿ ಮಂಡಲ ರಚನೆ
ಅರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಅರಂತೋಡಿನಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಸತ್ತು ಚುನಾವಣೆಯನ್ನು ನಡೆಸಲಾಯಿತು.ಈ ಚುನಾವಣೆಯನ್ನು ಆಧುನಿಕ ತಂತ್ರಜ್ಞಾನದ ನೆರವಿನಿಂದ ಮೊಬೈಲ್ ಅಪ್ಲಿಕೇಶನ್ ಬಳಸಿ ಇಲೆಕ್ಟ್ರಾನಿಕ್ ಮತಯಂತ್ರ (EVM) ಮಾದರಿಯಲ್ಲಿ ಯಶಸ್ವಿಯಾಗಿ ನಡೆಸಲಾಯಿತು. ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಗೌರವ ಸಲ್ಲಿಸಿದರು. ಚುನಾವಣಾ ಅಧಿಕಾರಿಗಳಾಗಿ ಪದ್ಮ ಕುಮಾರ್,ಕಿಶೋರ್ ಕುಮಾರ್, ಮೋಹನ್ ಚಂದ್ರ ಅವರು ಕಾರ್ಯನಿರ್ವಹಿಸಿ ಚುನಾವಣಾ ಪ್ರಕ್ರಿಯೆಯನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಿಕೊಟ್ಟರು.ಕಾಲೇಜಿನ […]


