ರಾಜ್ಯದಲ್ಲಿರುವ ಸರಕಾರಿ ವಿದ್ಯುತ್ ಕಂಪನಿಗಳನ್ನು ಖಾಸಗೀಕರಣಗೊಳಿಸಿ ಟಾಟಾ ಪವರ್ ಕಂಪನಿಗೆ ಲೈಸನ್ಸ್ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದ ಸುಳ್ಯ ತಾಲೂಕು ಘಟಕ ತಹಶೀಲ್ದಾರ್ ಮುಖಾಂತರ ಸರಕಾರಕ್ಕೆ ಮನವಿ ಸಲ್ಲಿಸಿದೆ.
ಖಾಸಗೀಕರಣದಿಂದ ರೈತರಿಗೆ ಹಾಗೂ ಜನಸಾಮಾನ್ಯರಿಗೆ ತುಂಬಾ ತೊಂದರೆಯಾಗುತ್ತದೆ. ಸರಕಾರದಿಂದ ರೈತರು ಹಾಗೂ ಗ್ರಾಹಕರಿಗೆ ಸಿಗುವ ವಿವಿಧ ಸೌಲಭ್ಯಗಳು ಕಡಿತಗೊಳ್ಳುವ ಸಾಧ್ಯತೆಯಿದೆ.
ಆದುದರಿಂದ ಲಾಭದಲ್ಲಿ ಇರುವ ಮೆಸ್ಕಾಂ ಕಂಪನಿಯನ್ನು ಯಾವ
ಕಾರಣಕ್ಕೂ ಟಾಟಾ ಪವರ್ ಕಂಪನಿಯವರಿಗೆ ಹಸ್ತಾಂತರಿಸಬಾರದು. ರೈತರ ಹಾಗೂ ಜನಸಾಮಾನ್ಯರ ಪರವಾಗಿ ರೈತ ಸಂಘವು ವಿರೋಧಿಸುತ್ತದೆ. ಹಾಗಾಗಿ ಈ ಕೂಡಲೇ ಟಾಟಾ ಪವರ್ ಕಂಪನಿಯ ಅರ್ಜಿಯನ್ನು ತಿರಸ್ಕರಿಸಬೇಕೆಂದು ರೈತ ಸಂಘದ ಸುಳ್ಯ ತಾಲೂಕು ಘಟಕ ಮನವಿಯಲ್ಲಿ ಒತ್ತಾಯಿಸಿದೆ.
ವಿದ್ಯುತ್ ಕಂಪನಿಗಳನ್ನು ಟಾಟಾ ಪವರ್ ಕಂಪನಿಗೆ ನೀಡುವ ಯೋಜನೆಯನ್ನು ಖಂಡಿಸಿ ರೈತ ಸಂಘದಿಂದ ಮನವಿ






























































