ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಮತ್ತು ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಇದರ ಆಶ್ರಯದಲ್ಲಿ ರಾಜ್ಯದಾದ್ಯಂತ ಆನ್ಲೈನ್ ಜಾಗೃತಿ ಕಾರ್ಯಕ್ರಮದ ಪ್ರಯುಕ್ತ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದ ಪ್ರಯುಕ್ತ ಸುಳ್ಯ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಸುಳ್ಯ ತಾಲೂಕಿನಾಧ್ಯಂತ 6 ಶಾಲೆಗಳಲ್ಲಿ ಏಕ ಕಾಲದಲ್ಲಿ ಆನ್ಲೈನ್ ಮೂಲಕ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ನಡೆಸಿದ್ದು, ಒಟ್ಟು 1054 ವಿದ್ಯಾರ್ಥಿಗಳು ಭಾಗವಹಿಸಿ ಮಾಹಿತಿಯನ್ನು ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮದಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ಬಿ,ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡರು ಮಾತನಾಡಿ ಪೂಜ್ಯ ವೀರೇಂದ್ರ ಹೆಗ್ಗಡೆ ಯವರು ಜನಜಾಗೃತಿ ಮೂಲಕ ಏಕಕಾಲದಲ್ಲಿ ಲಕ್ಷಾಂತರ ಮಕ್ಕಳಿಗೆ ಜಾಗೃತಿ ಮೂಡಿಸುವಂತಹ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡು ಉತ್ತಮ ಪ್ರಜೆಗಳಾಗಿ ಬಾಳಬೇಕು ಎಂದರು. ಪೂಜ್ಯ ಖಾವಂದರು, ದುಶ್ಚಟ ಮುಕ್ತ ಜೀವನ ನಡೆಸಿ ಎಂದು ಹೇಳಿ ಶುಭ ಹಾರೈಸಿದರು. ಮಾತೃಶ್ರೀ ಹೇಮಾವತಿ ಅಮ್ಮ ನವರು ಕಾರ್ಯಕ್ರಮ ಕ್ಕೆ ಶುಭ ಹಾರೈಸಿದರು
ತಾಲೂಕು ಜನಜಾಗ್ರತಿ ಅಧ್ಯಕ್ಷರಾದ ಶ್ರೀ ವೆಂಕಪ್ಪ ಗೌಡ ರವರು ಮಾದಕ ವಸ್ತು ಸೇವನೆಯಿಂದ ಅಪರಾಧಗಳೇ ಹೆಚ್ಚಾಗುತ್ತಿವೆ.ಮಾದಕ ವಸ್ತು ಸೇವನೆ ಮಾಡುವವರ ಮನಸ್ಸು, ದೇಹ ಅವರ ಸ್ಥಿಮಿತದಲ್ಲಿ ಇರುವುದಿಲ್ಲ. ಯಾರು ಕೂಡ ಮಾದಕವಸ್ತು ಸೇವನೆ ಮಾಡಬಾರದು, ದುಶ್ಚಾಟ ಮುಕ್ತ ಜೀವನ ಮಾಡಬೇಕು ಎಂದರು.
ಪ್ರಾಂಶುಪಾಲರಾದ ಡಾ.ಯಶೋಧ ರಾಮಚಂದ್ರ ರವರು ವಿದ್ಯಾರ್ಥಿಗಳಿಗೆ ಈ ಮಾಹಿತಿ ಉಪಯುಕ್ತವಾಗಬಹುದು ಎಂದರು. ಈ ಕಾರ್ಯಕ್ರಮಕ್ಕೆ ಅವಕಾಶ ದೊರೆತ್ತಿರುವುದಕ್ಕೆ ಧನ್ಯವಾದ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಕಣೆಮರಡ್ಕ,ಜನಜಾಗೃತಿ ನಿಕಟ ಪೂರ್ವ ಅಧ್ಯಕ್ಷರಾದ ಲೋಕನಾಥ ಆಮೇಚೂರು, ಸುಳ್ಯ ವಲಯ ಜನಜಾಗ್ರತಿ ಅಧ್ಯಕ್ಷರಾದ ವಿಜಯ ಕುಮಾರ್ ಉಬರಡ್ಕ, ಜನಜಾಗೃತಿ ಸದಸ್ಯರಾದ ಬೂಡು ರಾಧಾಕೃಷ್ಣ ರೈ, ಜಿನ್ನಪ್ಪಪೂಜಾರಿ ಸುಳ್ಯ ಉಪಸ್ಥಿತರಿದ್ದರು. ಡಾ.ವೆಂಕಟೇಶ್ ಪ್ರಸನ್ನ ಎಸ್ ಪಿ ಬೆಂಗಳೂರು, ಡಾ. ದೇವಿಪ್ರಸಾದ್ ಶೆಟ್ಟಿ ಖ್ಯಾತ ಹೃದ್ರೂಗ ತಜ್ಞರು ಮಾಹಿತಿ ಮಾರ್ಗದರ್ಶನ ನೀಡಿದರು. ಉಪ ಪ್ರಾಂಶುಪಾಲರು ದೀಪಕ್ ವೈ.ಆರ್ ಸ್ವಾಗತಿಸಿದರು, ಮೇಲ್ವಿಚಾರಕ ದಿನೇಶ್ ಡಿ ವಂದಿಸಿದರು, ಶಿಕ್ಷಕಿ ಮಲ್ಲಿಕಾ ರವರು ಕಾರ್ಯಕ್ರಮ ನಿರೂಪಿಸಿದರು.
ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಹಿತಿ ಕಾರ್ಯಕ್ರಮ






























































