ಕರ್ನಾಟಕ ಸರ್ಕಾರದ ಅರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾಗಿ ಸುಳ್ಯಕ್ಕೆ ಪ್ರಪ್ರಥಮ ಬಾರಿಗೆ ಆಗಮಿಸುತ್ತಿರುವ ಯು. ಟಿ. ಖಾದರ್ ಫರೀದ್ ರವರನ್ನು ಸಾರ್ವಜನಿಕ ಅಭಿನಂದನಾ ಸಮಿತಿ ಯಿಂದ ಆಯೋಜಿಸಲಾದ ಸಾರ್ವಜನಿಕ ಅಭಿನಂದನಾ ಸಮಾರಂಭ ದ ಆಮಂತ್ರಣ ಪತ್ರಿಕೆಯನ್ನು ಸುಳ್ಯ ತಹಶೀಲ್ದಾರ್ ಕು| ಮಂಜುಳಾ ಬಿಡುಗಡೆ ಗೊಳಿಸಿದರು
ಸುಳ್ಯ ಕ್ಷೇತ್ರದ ಶಾಸಕರ ಅಧ್ಯಕ್ಷತೆಯಲ್ಲಿ, ಎಲ್ಲಾ ಧರ್ಮಗಳ ಧಾರ್ಮಿಕ ನಾಯಕರುಗಳ, ವಿವಿಧ ಇಲಾಖೆಗಳ ಅಧಿಕಾರಿಗಳ, ವಿವಿಧ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆ ಯೊಂದಿಗೆ ನಡೆಯುವ ಈ ಸಮಾರಂಭ ಯಶಸ್ವಿ ಯಾಗಲಿ ಎಂದು ಉದ್ಘಾಟಕರು ಹಾರೈಸಿದರು
ಈ ಸಂದರ್ಭದಲ್ಲಿ ಅಭಿನಂದನಾ ಸಮಿತಿಯ ಪ್ರದಾನ ಸಂಚಾಲಕ ಭರತ್ ಮುಂಡೋಡಿ, ಕರ್ನಾಟಕ ಕಾರ್ಮಿಕರ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ. ಎಂ. ಶಹೀದ್, ಸುಳ್ಯ ಬ್ಲಾಕ್ ಅಧ್ಯಕ್ಷ ರಾದ ರಾಧಾಕೃಷ್ಣ ಬೊಳ್ಳೂರು, ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ. ಎಸ್. ಗಂಗಾಧರ್, ಹಿರಿಯ ಪತ್ರಕರ್ತ ಗಂಗಾಧರ ಮಟ್ಟಿ, ಸುಳ್ಯ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ. ಎಂ. ಮುಸ್ತಫ, ಅರೆ ಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ. ಸಿ. ಜಯರಾಮ್,ಕೆಪೆಕ್ ಮಾಜಿ ನಿರ್ದೇಶಕ ಪಿ. ಎ. ಮಹಮ್ಮದ್, ಆರಂತೋಡು ಎನ್ನೆoಪಿಯು ಸಂಚಾಲಕ ಎ. ಸಿ. ವಸಂತ, ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ ಆಪರೇಟಿವ್ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ತೀರ್ಥ ರಾಮ ಆಡ್ಕಬಳೆ ಮೊದಲಾದವರು ಉಪಸ್ಥಿತರಿದ್ದರು
ಜುಲೈ 6 ; ಸುಳ್ಯದಲ್ಲಿ ಆರೋಗ್ಯ ಸಚಿವರಾದ ಯು. ಟಿ ಖಾದರ್ ರವರಿಗೆ ಸಾರ್ವಜನಿಕ ಸನ್ಮಾನ






























































