ಬಸ್ಸಿನ ಕಂಡೆಕ್ಟರ್ ಓರ್ವನು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ವಿಟ್ಲ ನಡುವೆ ಸಂಚರಿಸುವ ಖಾಸಗಿ ಬಸ್‌ನ ಕಂಡಕ್ಟರ್ ಇರ್ಫಾನ್ (32) ಕಾಲೇಜು ವಿದ್ಯಾರ್ಥಿನಿಯರಿಗೆ ಚಲಿಸುವ ಬಸ್‌ನಲ್ಲೇ ಲೈಂಗಿಕ ಕಿರುಕುಳ, ಅಸಭ್ಯ ಸನ್ನೆ ಹಾಗೂ ಗುಪ್ತಾಂಗ ಪ್ರದರ್ಶನ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ದೂರಿನ ಮೇರೆಗೆ ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸರು ಪ್ರಕರಣ ದಾಖಲಿಸಿ, ಜುಲೈ 10ರಂದು ಆರೋಪಿಯನ್ನು ಬಂಧಿಸಿ ತನಿಖೆ ಆರಂಭಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಚಲಿಸುವ ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿದ ವಿಕೃತ ಕಾಮಿ ಕಂಡೆಕ್ಟರ್ !

































































