ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವು

ಮರದಿಂದ ಆಯ ತಪ್ಪಿ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಮೃತ ಪಟ್ಟ ಘಟನೆ ಸಂಪಾಜೆ ಗ್ರಾಮದಿಂದ ವರದಿಯಾಗಿದೆ.
ಮೃತ ವ್ಯಕ್ತಿ ದಂಡಕಜೆ ನಿವಾಸಿ ಮರಿಯಾ ರಾಜು (ಚಾರ್ಲಿ) ಎಂದು ಗುರುತಿಸಲಾಗಿದೆ.
ಜು 8 ರಂದು ಕೂಲಿ ಕಾರ್ಮಿಕರಾದ ಅವರು ಮರದ ಗೆಲ್ಲು ಕಡಿಯುತ್ತಿದ್ದಾಗ ಮರದಿಂದ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಜೂನ್ 11ರಂದು ಬೆಳಿಗ್ಗೆ ಅವರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಗಾಯಗೊಂಡ ಸಂದರ್ಭದಲ್ಲಿ ಸ್ಥಳೀಯರು ತಾಜುದ್ದೀನ್ ಟರ್ಲಿ ಯವರ ಆಂಬುಲೆನ್ಸ್‌ ಮೂಲಕ ಸುಳ್ಯ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆಯ ಬಳಿಕ ಮಂಗಳೂರು ವೆಸ್ಲಾಕ್ ಆಸ್ಪತ್ರೆಯಲ್ಲಿ ದಾಖಲಿಸಿದ್ದರು.



























































































































Leave a Comment

Your email address will not be published. Required fields are marked *

error: Content is protected !!
Scroll to Top