ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಮೇಲೆ ಮಾರಕಾಸ್ತ್ರದಿಂದ ಯುವಕನೋರ್ವ ದಾಳಿ ನಡೆಸಿದ ಘಟನೆ ನಡೆದಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ
ಘಟನೆ ವರದಿಯಾಗಿದೆ.
ಮೃತರನ್ನು ಕಕ್ಕೆಪದವು ನಿವಾಸಿ ಬಾಳಪ್ಪ ಗೌಡರವರ ಮಗಳು ಲಾವಣ್ಯ ಗೌಡ (25) ಎಂದು ತಿಳಿದು ಬಂದಿದೆ.
ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್‌ನಲ್ಲಿ ಕೆಲಸ ಮಾಡುತ್ತಿದ್ದು. ಕೆಲಸ ಮುಗಿಸಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಆರೋಪಿ ಕ್ರತ್ಯ ಎಸಗಿದ್ದಾನೆ.
ಮೇಲ್ನೋಟಕ್ಕೆ ಆರೋಪಿಯನ್ನು ಬೆಳ್ತಂಗಡಿ ಓಡಿಲ್ನಾಳ ಗ್ರಾಮದ ಚೇತನ್ ಎಂದು ಗುರುತಿಸಲಾಗಿದ್ದು, ಆತ ಮೃತ ಯುವತಿಯ ದೂರದ ಸಂಬಂಧಿಯಾಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಲಾವಣ್ಯಳನ್ನು ಏಕಮುಖವಾಗಿ ಪ್ರೀತಿಸುತ್ತಿದ್ದು ಪ್ರೀತಿಯನ್ನು ನಿರಾಕರಿಸಿದ ಕಾರಣ ಕೊಲೆ ಮಾಡಿದ ಶಂಕೆ ವ್ಯಕ್ತವಾಗಿದೆ.
ಬಂಟ್ವಾಳ : ಲಾವಣ್ಯ ಗೌಡ ಯುವಕನ ಭೀಕರ ತಲವಾರು ದಾಳಿಗೆ ಬಲಿ




































































